ಕುಕ್ಕೆಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಕಾರ್ಯಾಗಾರ

0


ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಮಣ್ಯ ಆಂತರಿಕ ಗುಣಮಟ್ಟ ಭರವಸಾ ಕೋಶದಡಿ ವಾಣಿಜ್ಯ ಹಾಗೂ ಉದ್ಯಮಾಡಳಿತ ವಿಭಾಗದಿಂದ ಜೂ. 24 ರಂದು GST e-filing ಕುರಿತು ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು.


ಕಾರ್ಯಾಗಾರದಲ್ಲಿ Tax and Labour Law Consultant
ಆಗಿರುವ, ಮಹಾವಿದ್ಯಾಲಯದ ಹಳೆಯ ವಿದ್ಯಾರ್ಥಿಯಾದ ಲಿತಿನ್ ರವರು ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿಯನ್ನು ನೀಡಿದರು. ಈ ಕಾರ್ಯಾಗಾರದಲ್ಲಿ ಪ್ರಾಂಶುಪಾಲರಾದ ಡಾ.ದಿನೇಶ .ಪಿ.ಟಿ, ವಾಣಿಜ್ಯ ಹಾಗೂ ಉದ್ಯಾಮಾಡಳಿತ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಲತಾ .ಬಿ.ಟಿ ಹಾಗೂ ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಶ್ರೀಮತಿ ಪುಷ್ಪ. ಡಿ. ಉಪಸ್ಥಿತರಿದ್ದರು.

ಕಾರ್ಯಗಾರಕ್ಕೆ ಅಂತಿಮ ಪದವಿಯ ಸ್ನೇಹ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು ಮತ್ತು ಇಂದ್ರಕುಮಾರ್ ವಂದಿಸಿದರು.