ಸುಳ್ಯ ಶ್ರೀ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ

0

ಶ್ರೀ ಶಾರದಾ ಮಹಿಳಾ ಪದವಿಪೂರ್ವ ಕಾಲೇಜಿನ 2023- 2024ನೇ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆಯನ್ನು ನಡೆಸಲಾಯಿತು.
ವಿದ್ಯಾರ್ಥಿನಿಯರಲ್ಲಿ ಪ್ರಜಾಸತ್ತಾತ್ಮಕ ತತ್ವಗಳ ಬಗ್ಗೆ ಅರಿವು ಮೂಡಿಸುವ ಸಲುವಾಗಿ ನೈಜ ಮತದಾನದ ಮೂಲಕ ಗೌಪ್ಯತೆಯಿಂದ ಮತದಾನ ಮಾಡಲಾಯಿತು.


ವಿದ್ಯಾರ್ಥಿನಿ ಸಂಘದ ಅಧ್ಯಕ್ಷೆ ಪರಿಷ್ಮಾ ಕೆ. ಡಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗ, ಕಾರ್ಯದರ್ಶಿ ಸಹಲ ಪ್ರಥಮ ಪಿಯುಸಿ ವಿಜ್ಞಾನ ವಿಭಾಗ, ಸಾಂಸ್ಕೃತಿಕ ಕಾರ್ಯದರ್ಶಿ ಪ್ರಜ್ಞಾ. ಕೆ. ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗ, ಜತೆ ಕಾರ್ಯದರ್ಶಿ ಸೋನಾ ಬಿ .ಎಸ್ ಪ್ರಥಮ ಪಿಯುಸಿ ವಿಜ್ಞಾನ ವಿಭಾಗ, ಕ್ರೀಡಾ ಕಾರ್ಯದರ್ಶಿ ಕೃತಿ. ಎಲ್ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗ, ಜತೆ ಕಾರ್ಯದರ್ಶಿ ಕೃತಿಕಾ ಪ್ರಥಮ ಪಿಯುಸಿ ವಿಜ್ಞಾನ ವಿಭಾಗ ಇವರುಗಳು ಆಯ್ಕೆಯಾಗಿರುತ್ತಾರೆ.ರಾಜ್ಯಶಾಸ್ತ್ರ ಉಪನ್ಯಾಸಕರಾದ ದಾಮೋದರ್ ಎನ್ ರವರು ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.