ಅಂಜಲಿ ಮೋಟೆಸ್ಸೋರಿ ಶಾಲೆಯಲ್ಲಿ ಪೋಷಕರ ಪುನಶ್ಚೇತನ ಕಾರ್ಯಾಗಾರವನ್ನು ಜೂ.24ರಂದು ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಶಾಲೆಯ ಪೋಷಕರ ಪ್ರತಿನಿಧಿಗಳಾಗಿ ಸುಶಾನ್ ಕೆ.ಎಸ್. ಹಾಗೂ ಶ್ರೀಮತಿ ಶಿಲ್ಪಾ ಗಾಣಿಗರವನ್ನು ಆಯ್ಕೆ ಮಾಡಲಾಯಿತು.
ಸಂಸ್ಥೆಯ ಆಧ್ಯಕ್ಷ ಶುಭಕರ ಬೊಳುಗಲ್ಲು ಕಾರ್ಯಕ್ರಮ ಉದ್ಘಾಟಿಸಿ ಶುಭ ಕೋರಿದರು.
ಸಂಸ್ಥೆಯ ಸಂಚಾಲಕಿ ಗೀತಾಂಜಲಿ ಟಿ.ಜಿ. ರವರು ಮೋಟೆಸ್ಸೋರಿ ಪದ್ಧತಿಯ ಶಿಕ್ಷಣದ ಕುರಿತಾಗಿ ಮಾಹಿತಿ ನೀಡಿದರು.
ಹಾಗೂ ಶಿಕ್ಷಣ ಪದ್ಧತಿಯಲ್ಲಿ ಅಳವಡಿಸಿಕೊಳ್ಳಲಾಗುವ ಚಟುವಟಿಕೆಗಳ ಬಗ್ಗೆ ಪ್ರಾಯೋಗಿಕವಾಗಿ ಪ್ರಾತಿಕ್ಷಿತೆ ನೀಡಿದರು.
ಈ ಸಂದರ್ಭದಲ್ಲಿ ಶಾಲೆಯ ಎಲ್ಲಾ ಕಾರ್ಯಕ್ರಮಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಳ್ಳುವ ಪೋಷಕರಾದ ಚೇತನ್ ಬಿ.ಪೋತ್ಕರೆ ಹಾಗೂ ಶಿಕ್ಷಕಿ ಶ್ರೀಮತಿ ಲಕ್ಷ್ಮಿ ಶೆಟ್ಟಿರವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ಪೋಷಕರು ಉಪಸ್ಥಿತರಿದ್ದು, ಕಾರ್ಯಕ್ರಮ ಯಶಸ್ವಿಗೊಳಿಸಿದರು.