ಪೈಲಾರು : ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಸುಳ್ಯ ಇದರ ಆಶ್ರಯದಲ್ಲಿ ದೊಡ್ಡ ತೋಟ ವಲಯದ ಪೈಲಾರು ಒಕ್ಕೂಟದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಕಾರ್ಯಕ್ರಮವು ಜೂ.25ರಂದು ನಡೆಯಿತು.


ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರಾದ ದಯಾನಂದ ಗುಡ್ಡೆಮನೆ ಜನಜಾಗೃತಿ ವೇದಿಕೆಯ ವಲಯ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಬೊಳ್ಳೂರು, ವಲಯದ ಮೇಲ್ವಿಚಾರಕರಾದ ಕೃಷ್ಣಪ್ಪ ಯಮ್ ಸೇವಾ ಪ್ರತಿನಿಧಿ ಶ್ರೀಮತಿ ದಿವ್ಯ, ಚಂದ್ರಪ್ರಕಾಶ್ ಹಾಗೂ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ವರ್ಗಾವಣೆಗೊಂಡ ಸೇವಾ ಪ್ರತಿನಿಧಿಗಳಾದ ಶ್ರೀಮತಿ ಹರ್ಷಿತ , ಶ್ರೀಮತಿ ದಿವ್ಯ ಇವರನ್ನು ಒಕ್ಕೂಟದ ಅಧ್ಯಕ್ಷರು ಹಾಗೂ ನಿಕಟ ಪೂರ್ವ ಅಧ್ಯಕ್ಷರಾದ ನಾರಾಯಣ ಕೊಡ್ತುಗುಳಿ ಗೌರವಿಸಿದರು.
ಸೇವಾ ಪ್ರತಿನಿಧಿ ಶ್ರೀಮತಿ ಹರ್ಷಿತಾ ವಂದಿಸಿದರು.