ಪಟೇಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ತೆಕ್ಕಿಲ್ ಸ್ಕೂಲ್‌ಗೆ ಫ್ಯಾನ್ ಕೊಡುಗೆ

0

ಪಟೇಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ತೆಕ್ಕಿಲ್ ಆಂಗ್ಲ ಮಾಧ್ಯಮ ಶಾಲೆಗೆ 18 ಫ್ಯಾನುಗಳನ್ನು ಕೊಡುಗೆಯಾಗಿ ಜೂ.26 ರಂದು ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಉನೈಸ್ ಪೆರಾಜೆ ವಹಿಸಿದ್ದರು. ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿಯ ಗೌರವಾಧ್ಯಕ್ಷರಾದ ತಾಜ್ ಮಹಮ್ಮದ್ ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಟ್ರಸ್ಟ್ ನ ಅಧ್ಯಕ್ಷರಾದ ಬದ್ರುದ್ದೀನ್ ಪಟೇಲ್ ಹಾಗೂ ಸದಸ್ಯರುಗಳಾದ ಅಬ್ದುಲ್ ಖಾದರ್ ಪಟೇಲ್, ಶರೀಫ್ ಪಟೇಲ್, ಶಿಂಶಾರ್ ಪಟೇಲ್ ಮತ್ತು ಫಯಾಝ್ ಪಟೇಲ್ ಉಪಸ್ಥಿತರಿದ್ದರು.
ಶಾಲಾ ಆಡಳಿತ ಮಂಡಳಿಯ ವತಿಯಿಂದ ಪಟೇಲ್ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರು ಮತ್ತು ಸದಸ್ಯರಿಗೆ ಗೌರವಾರ್ಪಣೆ ನಡೆಯಿತು. ಟ್ರಸ್ಟ್ ನ ಅಧ್ಯಕ್ಷರು ಶಾಲೆಯ ಅಭಿವೃದ್ಧಿಗೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಸಂಪತ್ ಜೆ.ಡಿ. ಹಾಗೂ ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸಹ ಶಿಕ್ಷಕಿ ಶ್ರೀಮತಿ ಫರ್ಝಾನ ಕಾರ್ಯಕ್ರಮವನ್ನು ನಿರೂಪಿಸಿದರು. ಶಾಲಾ ಮುಖ್ಯೋಪಾಧ್ಯಾಯರು ಸ್ವಾಗತಿಸಿ, ಸಹ ಶಿಕ್ಷಕಿ ಶ್ರೀಮತಿ ಹರಿಣಾಕ್ಷಿ ವಂದಿಸಿದರು.