ಸಾರ್ವಜನಿಕ ಶಿಕ್ಷಣ ಇಲಾಖೆ, ಆಶ್ರಯದಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಮತ್ತು ಎಡಮಂಗಲ ಪ್ರೌಢಶಾಲಾ ಸಹಯೋಗದೊಂದಿಗೆ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರೌಢಶಾಲಾ ಮುಖ್ಯ ಶಿಕ್ಷಕರಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರ ಎಡಮಂಗಲ ಪ್ರೌಢಶಾಲೆಯಲ್ಲಿ ನಡೆಯುತ್ತಿದ್ದು, ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ವಿವಿಧ ಶಾಲೆಗಳ ಮುಖ್ಯ ಶಿಕ್ಷಕಕರು ಲಂಚ ಭ್ರಷ್ಟಾಚಾರದ ವಿರುದ್ಧ ಪ್ರತಿಜ್ಞೆ ಸ್ವೀಕರಿಸಿದರು. ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಕಾಶ್ ಮೂಡಿತ್ತಾಯ ಸುದ್ದಿ ಜನಾಂದೋಲನ ವೇದಿಕೆಯ ಬಗ್ಗೆ ಪ್ರಸ್ತಾಪಿಸಿದರು. ಎಡಮಂಗಲ ಪ್ರೌಢಶಾಲಾ ಮುಖ್ಯೋಪಾಧ್ಯಾಯ ರಾಮಚಂದ್ರ ಕಜ್ಜೋಡಿ ಸಹಕರಿಸಿದರು. ಸುದ್ದಿ ಸಿಬ್ಬಂದಿ ಬೃಂದಾ ಪೂಜಾರಿ ಘೋಷಣೆ ಹೇಳಿದರು. ಸುದ್ದಿ ವರದಿಗಾರ ಈಶ್ವರ ವಾರಣಾಶಿ, ಸುದ್ದಿ ಚಾನೆಲ್ ಕ್ಯಾಮರಾಮೆನ್ ಯತೀಶ್ ಕದ್ರ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.