ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು, ಅಖಿಲ ಕರ್ನಾಟಕ ಜನ
ಜಾಗೃತಿ ವೇದಿಕೆ ಬೆಳ್ತಂಗಡಿ, ಜನ ಜಾಗೃತಿ ವೇದಿಕೆ ಗುತ್ತಿಗಾರು ವಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಮಾದಕ ವಸ್ತುಗಳ ವಿರೋಧಿ ದಿನ ಕಾರ್ಯಕ್ರಮವನ್ನು ಜೂ.26 ರಂದು ನಡೆಸಲಾಯಿತು.
ಕಾಲೇಜ್ ನ ಪ್ರಾಂಶುಪಾಲರಾದ ಶ್ರೀಮತಿ ಚೆನ್ನಮ್ಮ ಅಧ್ಯಕ್ಷತೆಯಲ್ಲಿ ವಹಿಸಿದ್ದರು.
ಕಾರ್ಯಕ್ರಮವನ್ನು ಗುತ್ತಿಗಾರು ವಲಯದ ಜನ ಜಾಗೃತಿ ವೇದಿಕೆಯ ಅಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿಯವರು ದೀಪ ಬೆಳಗಿಸಿ ಉದ್ಘಾಟನೆಯನ್ನು ಮಾಡಿದರು. ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಹಾಗೂ ಮಾದಕ ವಸ್ತುಗಳಿಂದ ದೂರ ಇರುವ ಬಗ್ಗೆ ತ ಸಂಪನ್ಮೂಲ ವ್ಯಕ್ತಿಗಳಾದ ವಲಯ ಜನ ಜಾಗೃತಿ ವೇದಿಕೆಯ ನಿಕಟ ಪೂರ್ವ ಅಧ್ಯಕ್ಷರಾದ ಲೋಕೇಶ್ ಪೀರನಮನೆ ತಿಳಿಸಿದರು.
ಈ ಸಂದರ್ಭದಲ್ಲಿ ಗುತ್ತಿಗಾರು ಕಾರ್ಯಕ್ಷೇತ್ರದ ಸೇವಾಪ್ರತಿನಿಧಿಯವರಾದ ಲೋಕೇಶ್ ಡಿ ಆರ್, ಕಾಲೇಜಿನ ಉಪನ್ಯಾಸಕರುಗಳು ಉಪಸ್ಥಿತರಿದ್ದರು.
ಈ ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕರಾದ ಬಾಲಕೃಷ್ಣ ಗೌಡ ಕೆ ರವರು ಸ್ವಾಗತಿಸಿ, ಕಾಲೇಜಿನ ಇಂಗ್ಲೀಷ್ ಉಪನ್ಯಾಸಕರಾದ ಕುಮಾರಿ ದಿವ್ಯಾರವರು ಧನ್ಯವಾದವಿತ್ತರು. ಕಾಲೇಜಿನ ಇತಿಹಾಸ ಉಪನ್ಯಾಸಕರಾದ ಶ್ರೀಮತಿ ಪ್ರೀತಿ ರೈರವರು ಕಾರ್ಯನಿರೂಪಿಸಿದರು.