ಕನಕಮಜಲು ಗ್ರಾಮ ಪಂಚಾಯತಿ ಸಾಮಾನ್ಯ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀಧರ ಕುತ್ಯಾಳ ಅವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತಿ ಸಭಾಭವನದಲ್ಲಿ ಜೂ.27ರಂದು ನಡೆಯಿತು.
ಸಭೆಯಲ್ಲಿ ಗ್ರಾಮದ ಅಭಿವೃದ್ದಿ ಕಾಮಗಾರಿಗಳ ಅನುಷ್ಠಾನ,ವಸತಿ ಯೋಜನೆಗಳ ಪ್ರಗತಿ ಬಗ್ಗೆ ಚರ್ಚಿಸಲಾಯಿತು. ಮುಂದಿನ ಮಳೆಗಾಲದ ಸಮಯದಲ್ಲಿ ಸಂಭವಿಸಬಹುದಾದ ಪ್ರಾಕೃತಿಕ ವಿಕೋಪದ ಬಗ್ಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಕುರಿತು ಚರ್ಚೆ ನಡೆಯಿತು.
ಈ ಸಂದರ್ಭದಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ದೇವಕಿ ಕುದ್ಕುಳಿ, ಸದಸ್ಯರಾದ ಶ್ರೀಮತಿ ಸುಮಿತ್ರ ಕುತ್ಯಾಳ, ಶ್ರೀಮತಿ ಶಾರದಾ ಉಗ್ಗಮೂಲೆ ಉಪಸ್ಥಿತರಿದ್ದರು. ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸರೋಜಿನಿ ಅವರು ಸ್ವಾಗತಿಸಿ, ಕಾರ್ಯದರ್ಶಿ ರಮೇಶ್ ವಂದಿಸಿದರು.