ವಿನೋಬನಗರ: ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಸ್ಕೌಟ್ ಗೈಡ್ ಶಿಬಿರ

0

ಜಾಲ್ಸೂರು ಗ್ರಾಮದ ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಭಾರತ್ ಸ್ಕೌಟ್ – ಗೈಡ್ ನ ಒಂದು ದಿನದ ಶಿಬಿರವನ್ನು ನಡೆಸಲಾಯಿತು .

ಕಾರ್ಯಕ್ರಮವನ್ನು ಶಾಲಾ ಎಸ್‌.ಡಿ.ಎಂ.ಸಿ. ಉಪಾಧ್ಯಕ್ಷ ರವಿರಾಜ್ ಗಬ್ಬಲಡ್ಕ ಅವರು ದೀಪ ಬೆಳಗಿಸಿ, ಭಾರತ ಮಾತೆಗೆ ಪುಷ್ಪಾರ್ಚನೆ ಮಾಡಿ ಉದ್ಘಾಟಿಸಿದರು.

ಭಾರತ್ ಸ್ಕೌಟ್ – ಗೈಡ್ ನ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ಪ್ರೇಮಲತಾ ಅವರು ಶುಭಹಾರೈಸಿದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ದಾಮೋದರ ನೇರಳ ಅವರು ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು.


ಈ ಸಂದರ್ಭದಲ್ಲಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಗಿರೀಶ್ ಕುಮಾರ್, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯರಾದ ಜಯಪ್ರಸಾದ್ ಕಾರಿಂಜ ಸೇರಿದಂತೆ ಶಾಲಾ ಸಹಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
ಸಹಶಿಕ್ಷಕಿ ಶ್ರೀಮತಿ ಲೀಲಾವತಿ ಸ್ವಾಗತಿಸಿ, ಸಹ ಶಿಕ್ಷಕಿ ಶ್ರೀಮತಿ ಅನನ್ಯ ವಂದಿಸಿದರು. ಸಹ ಶಿಕ್ಷಕಿ ಶ್ರೀಮತಿ ಪೂರ್ಣಿಮಾ ಕಾರ್ಯಕ್ರಮ ನಿರೂಪಿಸಿದರು.