ಮರ್ಕಂಜ ಪ್ರೌಢಶಾಲೆಯಲ್ಲಿ ಪರಿಸರ ದಿನಾಚರಣೆ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸರಕಾರಿ ಪ್ರೌಢಶಾಲೆ ಮರ್ಕಂಜದಲ್ಲಿ ಪರಿಸರ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಕಾರ್ಯಕ್ರಮದ ಅಧ್ಯಕ್ಷತೆಯನ್ನು SDMC ಅಧ್ಯಕ್ಷರಾದ ಆನಂದ ಗೌಡ ಬಾಣೂರು ಅವರು ವಹಿಸಿದ್ದರು. ಮರ್ಕಂಜ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಪವಿತ್ರ ಗುಂಡಿಯವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಸ್ನೇಹ ವಿದ್ಯಾಸಂಸ್ಥೆಯ ಸಂಸ್ಥಾಪಕರು, ಹಿರಿಯ ಶಿಕ್ಷಕರಾದ ಚಂದ್ರಶೇಖರ ದಾಮ್ಲೆಯವರು ಪರಿಸರದ ಬಗ್ಗೆ ಮಾಹಿತಿ ಮಾರ್ಗದರ್ಶನ ನೀಡಿದರು. ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ಸ್ಪರ್ಧೆಯನ್ನು ಆಯೋಜಿಸಿ ಬಹುಮಾನ ವಿತರಿಸಲಾಯಿತು. ಪರಿಸರ ಕಾರ್ಯಕ್ರಮದ ಅಂಗವಾಗಿ ಗಿಡ ನಾಟಿಯನ್ನು ಮಾಡಲಾಯಿತು. ಮರ್ಕಂಜ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಗೋವಿಂದ ಅಳವುಪಾರೆ, ಸ. ಪ್ರೌ. ಶಾಲೆ ಶಿಕ್ಷಕರಾದ ಶ್ರೀಮತಿ ಪ್ರವೀಣ ಕುಮಾರಿ, ಮಿತ್ತಡ್ಕ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಲೀಲಾವತಿ ಸೂಟೆಗದ್ದೆ, ತಾಲೂಕು ಕೃಷಿ ಮೇಲ್ವಿಚಾರಕರಾದ ರಮೇಶ್, ಸಂಪಾಜೆ ವಲಯ ಮೇಲ್ವಿಚಾರಕರಾದ ಜಯಶ್ರೀ,SDMC ಸದಸ್ಯರು, ಒಕ್ಕೂಟದ ಪದಾಧಿಕಾರಿಗಳು,ಸದಸ್ಯರು ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಉಪಸ್ಥಿತರಿದ್ದರು.

ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು, ವಲಯ ಮೇಲ್ವಿಚಾರಕರಾದ ಜಯಶ್ರೀಯವರು ಸ್ವಾಗತಿಸಿದರು. ಮಿತ್ತಡ್ಕ ಒಕ್ಕೂಟದ ಗೀತಾ ಹೊಸೋಳಿಕೆ ವಂದಿಸಿದರು. ಮಿತ್ತಡ್ಕ ಸೇವಾ ಪ್ರತಿನಿಧಿ ನಿತ್ಯಾನಂದ ಭೀಮ ಗುಳಿಯವರು ನಿರೂಪಣೆ ಮಾಡಿದರು.