ಸುಳ್ಯ ತಾಲೂಕು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ (ಪಿಯುಸಿ ಹಾಗೂ ಪಿಯುಸಿ ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ 1, IIಎ 2ಬಿ, 2ಬಿ, 3ಬಿ, 3 ಎ, ಪ .ಜಾತಿ / ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2023-24 ನೇ ಸಾಲಿಗೆ ಆನ್ ಲೈನ್ ಮೂಲಕ ಅರ್ಜಿ
ಆಹ್ವಾನಿಸಲಾಗಿದೆ.
ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ – 1 ಎಸ್ & ಎಸ್.ಟಿ ರೂ 2.50 ಲಕ್ಷ, 2ಎ, 2 ಬಿ, 3 ಎ, 3 ಬಿ, ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ರೂ.1 ಲಕ್ಷ
ಅರ್ಜಿಯನ್ನು : www.Shp.karnataka.gov.in ನಲ್ಲಿ ಸಲ್ಲಿಸಬೇಕು
ಅರ್ಜಿ ಸಲ್ಲಿಸಲು ಜು.15 ಕೊನೆಯ ದಿನ.
ಹೆಚ್ಚಿನ ಮಾಹಿತಿಗಾಗಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಯವರ ಕಛೇರಿ
ಕೊಡಿಯಾಲ್‌ಬೈಲ್ ಸುಳ್ಯ ಇವರನ್ನು ಸಂಪರ್ಕಿಸಬಹುದು, ಹೆಚ್ಚಿನ ಮಾಹಿತಿಗೆ 08257-230659.