ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕೋತ್ಸವ

0


ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕೋತ್ಸವವನ್ನು ಜು. 1 ರಂದು ಆಚರಿಸಲಾಯಿತು. ಅತಿಥಿಗಳಾಗಿ ಭಾಗವಹಿಸಿದ್ದ ಪುತ್ತೂರು ಡಿ.ವೈ.ಎಸ್.ಪಿ ಡಾ. ಗಾನ ಪಿ. ಕುಮಾರ್ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಗೂ ಜೀವನದಲ್ಲಿ ಗುರಿಯಿದ್ದು, ಆ ಗುರಿಯನ್ನು ಈಡೇರಿಸಿಕೊಳಲ್ಲು ಸರ್ವ ಪ್ರಯತ್ನವನ್ನು ಪದವಿಯ ಹಂತದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯೂ ಮಾಡಲೇ ಬೇಕು ಎಂದರು.

ಅತಿಥಿಯಾಗಿದ್ದ ಇಸ್ಮಾಯಿಲ್ ಪಿ ಪ್ರಾಂಶುಪಾಲರು ಕೆಯ್ಯೂರು ಪಬ್ಲಿಕ್ ಸ್ಕೂಲ್ ಇವರು ತಮ್ಮ ಅತಿಥಿ ಭಾಷಣದಲ್ಲಿ ಶಿಕ್ಷಣ ಎನ್ನುವಂತದ್ದು ಜ್ಞಾನಕ್ಕೆ ಹಾಗೂ ಉದ್ಯೋಗಕ್ಕೆ ಸಂಬಂಧಪಟ್ಟ ವಿಚಾರ. ನಾವು ಪಡೆಯುವಂತಹ ಶಿಕ್ಷಣದಿಂದ ನಾವು ಬದುಕಬೇಕು ಹಾಗೂ ನಮ್ಮವರನ್ನೂ ಬದುಕಿಸಬೇಕು ಎನ್ನುವ ಪರಿಸ್ಥಿತಿ ನಿರ್ಮಾಣವಾಗುವಂತಿರಬೇಕು ಎಂದರು.


ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಸೀತಾರಾಮ ರೈ ಸವಣೂರು ಇವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ನಮ್ಮ ವಿದ್ಯಾಸಂಸ್ಥೆಗೆ ಆಹ್ವಾನಿಸಲ್ಪಡುವ ಎಲ್ಲಾ ಗಣ್ಯ ವ್ಯಕ್ತಿಗಳು ನೀಡುವಂತಹ ಮಾಹಿತಿಯನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ತಮ್ಮ ಜೀವನದಲ್ಲಿ ಮುಂದೆ ಬರುವಂತೆ ಸಲಹೆಯನ್ನು ನೀಡಿದರು. ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿಗಳಾದ ಇಂಜಿನಿಯರ್ ಅಶ್ವಿನ್ ಎಲ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ನಾರಾಯಣ ಮೂರ್ತಿ ಕೆ, ಇವರು ವಾರ್ಷಿಕ ವರದಿ ವಾಚನವನ್ನು ಮಾಡಿದರು. ಉಪಪ್ರಾಂಶುಪಾಲರಾದ ಶೇಷಗಿರಿ ಎಂ ಹಾಗೂ ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲರಾದ ಸೀತಾರಾಮ ಕೇವಳ ಉಪಸ್ಥಿತರಿದ್ದರು.


ಸಾಂಸ್ಕೃತಿಕ ಮತ್ತು ಕ್ರೀಡೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ಎಲ್ಲರನ್ನು ತೃತೀಯ ಬಿ.ಕಾಂ. ವಿದ್ಯಾರ್ಥಿನಿಯಾದ ಬುಶ್ರಾ ಸ್ವಾಗತಿಸಿ, ತೃತೀಯ ಬಿ.ಎ ವಿದ್ಯಾರ್ಥಿನಿಯಾದ ವರ್ಷಾ ಎಚ್.ಎಲ್ ವಂದಿಸಿದರು. ದ್ವಿತೀಯ ಬಿ.ಎ ವಿದ್ಯಾರ್ಥಿಯಾದ ಶಮೀರ್ ಕಾರ್ಯಕ್ರಮದ ನಿರೂಪಣೆಗೈದರು. ಕಾರ್ಯಕ್ರಮವು ಗಾಯತ್ರಿ ಮತ್ತು ಅಭೀಜ್ಞಾ ಇವರ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.