ಜು. 4: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ವತಿಯಿಂದ ಪತ್ರಿಕಾ ದಿನಾಚರಣೆ ಹಾಗೂ ಸನ್ಮಾನ

0

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ವತಿಯಿಂದ ಪತ್ರಿಕಾ ದಿನಾಚರಣೆ ಹಾಗೂ ಸನ್ಮಾನ ಕಾರ್ಯಕ್ರಮ ಜುಲೈ 4ರಂದು ಪೂರ್ವಾಹ್ನ 10 ಗಂಟೆಯಿಂದ ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ನಡೆಯಲಿದೆ.


ಕೆಜೆಯು ಜಿಲ್ಲಾಧ್ಯಕ್ಷ ಹರೀಶ್ ಬಂಟ್ವಾಳ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕೆ. ಜೆ ‌.ಯು. ಸುಳ್ಯ ಘಟಕದ ಅಧ್ಯಕ್ಷ ಶಿವಪ್ರಸಾದ್ ಆಲೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಪುತ್ತೂರು ವಿವೇಕಾನಂದ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಶ್ರೀಮತಿ ಭವ್ಯ ಪಿ. ಆರ್. ನಿಡ್ಪಳ್ಳಿ ಉಪನ್ಯಾಸ ನೀಡಲಿದ್ದಾರೆ. ಸುಳ್ಯದ ಸಬ್ ಇನ್ಸ್ ಪೆಕ್ಟರ್ ಈರಯ್ಯ ದೂಂತೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.


ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತರಾದ ಗಂಗಾಧರ ಮಟ್ಟಿ, ಬೆಳ್ಳಾರೆಯ ಹಿರಿಯ ಪತ್ರಿಕಾ ವಿತರಕರಾದ ಉಮೇಶ್ ಹೆಗ್ಡೆ ಅವರನ್ನು ಸನ್ಮಾನಿಸಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.