ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಎಣ್ಮೂರಿನಲ್ಲಿ ಜೂ.21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಯೋಗ ಪ್ರಾರ್ಥನೆಯ ಮೂಲಕ ಪ್ರಾರಂಭಿಸಲಾಯಿತು.
ನಂತರ ಸರಳ ವ್ಯಾಯಾಮಗಳು ಯೋಗಾಸನಗಳು ಹಾಗೂ ಪ್ರಾಣಯಾಮಗಳನ್ನು ಮಾಡಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಭವನೇಶ್ವರಿ ಕೆ. ಯೋಗಾಸನದ ಮಹತ್ವಗಳನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಅಬ್ದುಲ್ ಶರೀಫ್, ಉಪಾಧ್ಯಕ್ಷೆ ಶ್ರೀಮತಿ ಸುನಿತಾ ಹಾಗೂ ಶಿಕ್ಷಕ ವೃಂದವರು ಉಪಸ್ಥಿತರಿದ್ದರು.