ಮೈಸೂರು ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಎಂಎ ರಾಜ್ಯಶಾಸ್ತ್ರ ವಿಭಾಗದಲ್ಲಿ ಫಸ್ಟ್ ರ‍್ಯಾಂಕ್

ಮೈಸೂರು ವಿಶ್ವವಿದ್ಯಾನಿಲಯದ ವಾರ್ಷಿಕೋತ್ಸವದಲ್ಲಿ ಪದಕ ಮತ್ತು ಪ್ರಶಸ್ತಿ ಸ್ವೀಕರಿಸಿದ ಸುಳ್ಯ ಪೊಲೀಸ್ ಕಾನ್ಸ್ಟೇಬಲ್ ಠಾಣೆ ಮಧು ಜಿ.ಡಿ.

0

ಸುಳ್ಯ ಪೊಲೀಸ್ ಠಾಣೆಯಲ್ಲಿ ಕಳೆದ 5 ವರ್ಷಗಳಿಂದ ಪೊಲೀಸ್ ಕಾನ್ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿರುವ ಮಧು ಜಿ.ಡಿ. ಯವರು ಮೈಸೂರು ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2021-22 ನೇ ಸಾಲಿನ ಎಂಎ ರಾಜ್ಯಶಾಸ್ತ್ರ ವಿಭಾಗದಲ್ಲಿ 774 ಅಂಕ ಪಡೆದು ಪ್ರಥಮ ರ‍್ಯಾಂಕ್ ಪಡೆದಿದ್ದಾರೆ.

ಇಂದು ಮೈಸೂರಿನ ಕರಾಮುವಿಯ ಘಟಿಕೋತ್ಸವ ಭವನದಲ್ಲಿ ನಡೆದ ಸಂಸ್ಥೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹಲೋಟ್ ಮಧು ರವರಿಗೆ ಪದಕ ಮತ್ತು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಿದ್ದಾರೆ

ಮಧುರವರು ಪೊಲೀಸ್ ಕಾನ್ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿರುವ ಸಂದರ್ಭದಲ್ಲಿ ತಮ್ಮ ಕರ್ತವ್ಯದ ನಡುವೆ ಎಷ್ಟೇ ಒತ್ತಡಗಳು ಇದ್ದರೂ ಎಲ್ಲವನ್ನು ಸಹಿಸಿಕೊಂಡು ತಮ್ಮ ವಿದ್ಯಾಭ್ಯಾಸದ ಕಡೆ ಗಮನಹರಿಸಿ ಈ ಸಾಧನೆ ಮಾಡಿರುವುದು ಠಾಣೆಯ ಎಲ್ಲಾ ಸಹೋದ್ಯೋಗಿಗಳು ಮತ್ತು ಹಿರಿಯ ಅಧಿಕಾರಿಗಳಿಂದ ಪ್ರಶಂಸೆಗೆ ಪಾತ್ರರಾಗಿದ್ದಾರೆ.
ಇವರು ಮೂಲತಃ ಪಿರಿಯಾಪಟ್ಟಣ ತಾಲೂಕು ಗಂಗೂರು ಗ್ರಾಮದ ದೊಡ್ಡ ಮಾದೇಗೌಡರ ಪುತ್ರ.