ಪಂಜ: ಶ್ರೀ ಶಾರದಾಂಬಾ ಭಜನಾ ಮಂದಿರದಲ್ಲಿ ಉಚಿತ ಅರೋಗ್ಯ ತಪಾಸಣೆ ಶಿಬಿರ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪಂಜ ವಲಯದ ಜ್ಞಾನವಿಕಾಸ ಕೇಂದ್ರಗಳ ಮೂಲಕ ಸುಳ್ಯದ ಕೆ.ವಿ.ಜಿ.‌ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸಹಯೋಗದೊಂದಿಗೆ ಉಚಿತ ಅರೋಗ್ಯ ತಪಾಸಣೆ ಶಿಬಿರ ಜು. 2ರಂದು ಶ್ರೀ ಶಾರದಾಂಬಾ ಭಜನಾ ಮಂದಿರದಲ್ಲಿ ನಡೆಯಿತು. ಸಭಾಧ್ಯಕ್ಷತೆಯನ್ನು ಪಂಜ ಒಕ್ಕೂಟಗಳ ವಲಯ ಅಧ್ಯಕ್ಷ ಧರ್ಮಪಾಲ ಕಣ್ಕಲ್ ವಹಿಸಿದ್ದರು.

ಪಂಜ ಸರಕಾರಿ ಆಸ್ಪತ್ರೆಯ ವೈಧ್ಯಾಧಿಕಾರಿ ಡಾ. ಮಂಜುನಾಥ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಆಸ್ಪತ್ರೆಯಲ್ಲಿ ಸಿಗುವ ಸೌಲಭ್ಯದ ಬಗ್ಗೆ ವಿವರಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್, ಧರ್ಮಸ್ಥಳ ಇದರ ಗೌರವಾಧ್ಯಕ್ಷ ಬಾಲಕೃಷ್ಣ ಪುತ್ಯ ಮಾತನಾಡಿ ಅರೋಗ್ಯಿ ಇದ್ದರೆ ಜೀವನ ನವಜೀವನ ಆಗುವುದು. ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಿ ಎಂದರು.

ಕೆ.ವಿ.ಜಿ. ವೈದ್ಯಕೀಯ ಮಹಾವಿದ್ಯಾಲಯದ ಡಾ|| ರಾಕೇಶ್ ಆಸ್ಪತ್ರೆಯಲ್ಲಿ ದೊರಕುವ ಸೌಲಭ್ಯಗಳ ಬಗ್ಗೆ ತಿಳಿಸಿದರು. ವೇದಿಕೆಯಲ್ಲಿ ವಿಪತ್ತು ನಿರ್ವಹಣೆ ತಂಡದ ಸಂಯೋಜಕ ವಿಶ್ವನಾಥ ಸಂಪ, ವಲಯ ಮೇಲ್ವಿಚಾರಕಿ ಶ್ರೀಮತಿ ಕಲಾವತಿ ಉಪಸ್ಥಿತರಿದ್ದರು. ಐವತೋಕ್ಲು ಸೇವಾಪ್ರತಿನಿಧಿ ಶ್ರೀಮತಿ ರೋಹಿಣಿ ಆರ್ನೋಜಿ ಪ್ರಾರ್ಥಿಸಿದರು.

ಮೇಲ್ವಿಚಾರಕಿ ಶ್ರೀಮತಿ ಕಲಾವತಿ ಸ್ವಾಗತಿ, ತಾಲೂಕು ಸಮನ್ವಯಾಧಿಕಾರಿ ಶ್ರೀಮತಿ ಭಾರತಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.