ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ)ಸುಳ್ಯ ತಾಲೂಕು ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮವನ್ನು ಶ್ರೀ ಶಾರದಾಂಬ ಭಜನಾ ಮಂದಿರದಲ್ಲಿ ಕೆವಿಜಿ ವೈದ್ಯಕೀಯ ಮಹಾವಿದ್ಯಾಲಯ ಸುಳ್ಯ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಪಂಜ ಇವರುಗಳ ಸಹಯೋಗದೊಂದಿಗೆ ನಡೆಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಒಕ್ಕೂಟದ ವಲಯ ಅಧ್ಯಕ್ಷರಾದಂತಹ ಶ್ರೀ ಧರ್ಮಪಾಲ ಕನಕಲ್ ವಹಿಸಿದ್ದರು ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾಕ್ಟರ್ ಮಂಜುನಾಥ ರವರು ನಡೆಸಿಕೊಟ್ಟು ಮಳೆಗಾಲದಲ್ಲಿ ಬರುವಂತಹ ಕಾಯಿಲೆಗಳ,ಕಾಯಿಲೆ ಬರದಂತೆ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡು ಇವತ್ತಿನ ತಪಾಸಣಾ ಶಿಭಿರದ ಪ್ರಯೋಜನ ಪಡೆದುಕೊಳ್ಳುವಂತೆ ಶುಭ ಹಾರೈಸಿದರು.
ಡಾ. ರಾಕೇಶ್ ವೈದ್ಯಾಧಿಕಾರಿಗಳು ಜನರಲ್ ಮೆಡಿಸಿನ್ ವಿಭಾಗ ಕೆ ವಿ ಜಿ ಆಸ್ಪತ್ರೆ ಸುಳ್ಯ ಆರೋಗ್ಯ ತಪಾಸಣಾ ಶಿಬಿರದಲ್ಲಿ ಸಿಗುವಂತಹ ತಪಾಸನೆಗಳ ಕುರಿತು ವಿವರಿಸಿದರು. ರಾಜ್ಯ ಅಧ್ಯಕ್ಷರು ಶ್ರೀ ಕ್ಷೇತ್ರ ಮಂಜುನಾಥೇಶ್ವರ ಬಜನಾ ಪರಿಷತ್ ಧರ್ಮಸ್ಥಳ ಆರೋಗ್ಯ ಇದ್ದರೆ ಜೀವನ ಪಾವನವಾಗುವುದು ಗ್ರಾಮದ ಜನರಿಗೆ ಈ ಕಾರ್ಯಕ್ರಮದ ಪ್ರಯೋಜನ ಸಿಗಲಿ ಎಂದು ಶುಭ ಹಾರೈಸಿದರು ಕಾರ್ಯಕ್ರಮದಲ್ಲಿ ವಿಪತ್ತು ನಿರ್ವಹಣಾ ಘಟಕದ ಸಂಯೋಜಕರಾದ ವಿಶ್ವನಾಥ ಸಂಪ ಉಪಸ್ಥಿತರಿದ್ದರು. ಜ್ಞಾನ ವಿಕಾಸ ಸಮನ್ವಯಾಧಿಕಾರಿ ಶ್ರೀಮತಿ ಭಾರತಿ ಕಾರ್ಯಕ್ರಮ ನಿರ್ವಹಣೆ ಮಾಡಿದರು ವಲಯ ಮೇಲ್ವಿಚಾರಕಿಯಾದ ಶ್ರೀಮತಿ ಕಲಾವತಿಯವರು ಸ್ವಾಗತಿಸಿದರು. ಸುಮಾರು 150 ರಿಂದ 200 ಸದಸ್ಯರು ಕಾರ್ಯಕ್ರಮದ ಪ್ರಯೋಜನ ಪಡಕೊಂಡರು.