ದೇವಚಳ್ಳ ಗ್ರಾಮ ಸಭೆ

0

ದೇವಚಳ್ಳ ಗ್ರಾಮ ಪಂಚಾಯತ್ ನ 2022-23ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸುಲೋಚನಾ ದೇವರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಶ್ರೀಮತಿ ಗೀತಾ ನೋಡೆಲ್ ಅಧಿಕಾರಿಯಾಗಿದ್ದರು.‌


ವರದಿ ವಾಚನದ ಬಳಿಕ ಇಲಾಖಾಧಿಕಾರಿಗಳು ಮಾಹಿತಿ ನೀಡಿದರು. ಸಭೆಯಲ್ಲಿ ‌ನೀರಿನ‌ ಸಮಸ್ಯೆಯ ಬಗ್ಗೆ, ರಸ್ತೆ ಚರಂಡಿಯ ಬಗ್ಗೆ, ವಿದ್ಯುತ್ ಸಮಸ್ಯೆ ಬಗ್ಗೆ ಗ್ರಾಮಸ್ಥರು ಪ್ರಶ್ನಿಸಿ ಉತ್ತರ ಪಡೆದುಕೊಂಡರು.‌ ಸಭೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಬಿ. ಗುರುಪ್ರಸಾದ್, ಉಪಾಧ್ಯಕ್ಷೆ ಶ್ರೀಮತಿ ರಾಜೇಶ್ವರಿ ಹಾಗೂ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.