ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜು.4 ಮತ್ತು 5 ರಂದು ರೆಡ್ ಅಲರ್ಟ್ ಘೋಷಣೆಯಾಗಿದ್ದು, ಜು. 5 ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.