ಗುತ್ತಿಗಾರು: ಚಿಕಿತ್ಸೆಗಾಗಿ ಸಹಾಯ ಹಸ್ತ

0

ಗುತ್ತಿಗಾರು ಗ್ರಾಮದ ವಳಲಂಬೆ ನಿವಾಸಿ ಗಣಪಯ್ಯ ಹೊಸೋಳಿಕೆ ಯವರು ಬ್ರೈನ್ ಹ್ಯಾಮರೇಜ್ ನಿಂದ ಬಳಲುತ್ತಿದ್ದು, ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಬಳಿಕ ಚೇತರಿಸಿಕೊಳ್ಳುತ್ತಿದ್ದಾರೆ.


ಮುಂದಿನ ಚಿಕಿತ್ಸೆಗಾಗಿ ಹೆಚ್ಚಿನ ಹಣದ ಅವಶ್ಯಕತೆಯನ್ನು ಮನಗಂಡ ಕಿರಣ ಸಂಸ್ಥೆ ಅಧ್ಯಕ್ಷ ಯೋಗೀಶ್ ಹೊಸೋಳಿಕೆ ಮತ್ತು ವಳಲಂಬೆ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗೋಪಾಲಕೃಷ್ಣ ರವರು ದಾನಿಗಳಿಂದ ಸಂಗ್ರಹಿಸಿದ 35 ಸಾವಿರ ರೂಪಾಯಿಯನ್ನು ಗಣಪಯ್ಯರಿಗೆ ಹಸ್ತಾಂತರಿಸಿದರು.


ಈ ಸಂದರ್ಭದಲ್ಲಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಮಾಜಿ ಅಧ್ಯಕ್ಷ ಕೇಶವ ಹೊಸೋಳಿಕೆ ಉಪಸ್ಥಿತರಿದ್ದರು.