ಕನಕಮಜಲು: ಕೋಡಿ ತಿರುವಿನಲ್ಲಿ ಕಾರುಗಳ ಮಧ್ಯೆ ಪರಸ್ಪರ ಢಿಕ್ಕಿ: ಜಖಂ

0

ಎರಡು ಕಾರುಗಳ ಮಧ್ಯೆ ತಿರುವಿನಲ್ಲಿ ಢಿಕ್ಕಿ ಸಂಭವಿಸಿ, ಎರಡೂ ವಾಹನಗಳು ಜಖಂಗೊಂಡ ಘಟನೆ ಕನಕಮಜಲು ಗ್ರಾಮದ ಕೋಡಿ ತಿರುವಿನಲ್ಲಿ ಜು.5ರಂದು ಮಧ್ಯಾಹ್ನ ಸಂಭವಿಸಿದೆ.

ಸುಳ್ಯ ಕಡೆಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಕಾರು ಹಾಗೂ ಪುತ್ತೂರಿನಿಂದ ಸುಳ್ಯ ಕಡೆಗೆ ಬರುತ್ತಿದ್ದ ಇನ್ನೊಂದು ಕಾರಿನ ಮಧ್ಯೆ ಕೋಡಿ ತಿರುವಿನಲ್ಲಿ ಮುಖಾಮುಖಿ ಢಿಕ್ಕಿ ಸಂಭವಿಸಿದ್ದು, ಎರಡೂ ವಾಹನಗಳು ಜಖಂಗೊಂಡಿರುವುದಾಗಿ ತಿಳಿದುಬಂದಿದೆ. ಸುಳ್ಯ ಪೊಲೀಸರು ಸ್ಥಳಕ್ಕಾಗಮಿಸಿ, ಪ್ರಕರಣವನ್ನು ರಾಜಿಯಲ್ಲಿ ಇತ್ಯರ್ಥಪಡಿಸಿದರೆಂದು ತಿಳಿದುಬಂದಿದೆ.