ಭಾರೀ ಮಳೆ ಸಂಭವ: ನಾಳೆ ದ.ಕ. ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

0

ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ನಾಳೆಯೂ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜು.6 ರಂದು ಆರೆಂಜ್ ಅಲರ್ಟ್ ಘೋಷಣೆಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.