ಎಸ್.ಡಿ.ಆರ್.ಎಫ್, ಅಗ್ನಿಶಾಮಕ ದಳದವರಿಂದ
ಬಿರುಸಿನ ಶೋಧ ಕಾರ್ಯಾಚರಣೆ
ಸ್ಥಳಕ್ಕೆಭೇಟಿ ನೀಡಿದ ಸಹಾಯಕ ಕಮಿಷನರ್
ಆಲೆಟ್ಟಿ ಗ್ರಾಮದ ಕೂರ್ನಡ್ಕ ಎಂಬಲ್ಲಿ ಪಾಲ ದಾಟುತ್ತಿರುವ ವೇಳೆಯಲ್ಲಿ ಜು.6 ರ ಸಂಜೆಗೆ ಹೊಳೆಗೆ ಬಿದ್ದು ಕೊಚ್ಚಿಕೊಂಡು ಹೋಗಿರುವ ವ್ಯಕ್ತಿಯು ನಾಪತ್ತೆಯಾಗಿದ್ದು ಶೋಧ ಕಾರ್ಯಾಚರಣೆ ಇಂದು ಬೆಳಗ್ಗಿನಿಂದ ಆರಂಭಗೊಂಡಿದೆ. ಬೆಳ್ಳಂಬೆಳಗ್ಗೆ
ಎಸ್.ಡಿ.ಆರ್.ಎಫ್ ಹಾಗೂ ಅಗ್ನಿಶಾಮಕ ದಳ ತಂಡದ ಸುಮಾರು 15-20 ಮಂದಿ ಆಗಮಿಸಿ ಮೆಷಿನ್ ಬೋಟ್ ಬಳಸಿ ಹುಡುಕಾಟ ನಡೆಸುತ್ತಿದ್ದಾರೆ.
ಸ್ಥಳೀಯ ಮುಳುಗು ತಜ್ಞರು ಆಗಮಿಸಿ ನೀರಿನಲ್ಲಿ ಮುಳುಗಿ ಹುಡುಕಾಟ ನಡೆಸುತ್ತಿದ್ದಾರೆ.
ಸ್ಥಳಕ್ಕೆ ಸಹಾಯಕ ಕಮಿಷನರ್ ಗಿರೀಶ್ ನಂದನ್ ಕುಮಾರ್ ಭೇಟಿ ನೀಡಿದ್ದಾರೆ.
ಸುಳ್ಯತಹಶಿಲ್ದಾರ್ ಮಂಜುನಾಥ್, ಕಂದಾಯ ನಿರೀಕ್ಷಕ ಕೊರಗಪ್ಪ ಹೆಗ್ಡೆ, ಸಬ್ ಇನ್ಸ್ ಪೆಕ್ಟರ್ ಈರಯ್ಯ ದೂಂತೂರು ರವರು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ. ಬೆಳಗ್ಗಿನಿಂದ ನೂರಾರು ಸಂಖ್ಯೆಯಲ್ಲಿ ಜನರು ಜಮಾಯಿಸತೊಡಗಿದ್ದಾರೆ.