ಜಾಲ್ಸೂರು: ವಿಶ್ವ ಮಾದಕ ವಸ್ತುಗಳ ವಿರೋಧಿ ದಿನಾಚರಣೆ

0

ಸುಳ್ಯ ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಬಿ. ಸಿ. ಟ್ರಸ್ಟ್ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ, ಪ್ರಗತಿ ಬಂಧು ಸ್ವ -ಸಹಾಯ ಸಂಘಗಳ ಒಕ್ಕೂಟ ಜಾಲ್ಸುರು ವಲಯದ ವತಿಯಿಂದ ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆಯನ್ನು ಜಾಲ್ಸುರು ಗೇಟ್ ಒಕ್ಕೂಟದ ಸಹಯೋಗದೊಂದಿಗೆ ಅಡ್ಕಾರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ತಿಕೇಯ ಸಭಾಂಗಣದಲ್ಲಿ ಜು.9ರಂದು ಜರುಗಿತು.

ಜಾಲ್ಸುರು ವಲಯಾಧ್ಯಕ್ಷ ರವಿ ಅಡ್ಕಾರು ಅವರು ಅಧ್ಯಕ್ಷತೆ ವಹಿಸಿದ್ದರು. ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಜಾಲ್ಸೂರು ವಲಯಾಧ್ಯಕ್ಷರಾದ ಭಾಸ್ಕರ ಅಡ್ಕಾರು ಅವರು ಮಾದಕ ವಸ್ತು ಸೇವನೆಯಿಂದ ಆಗುವ ದುಷ್ಪರಿಣಾಮಗಳು ಹಾಗೂ ಇದರಿಂದ ಯಾವ ರೀತಿ ನಾವು ಮತ್ತು ಸಮಾಜ ಕಾಪಾಡಿ ಕೊಳ್ಳಬೇಕೆಂದು ಮಾಹಿತಿ ನೀಡಿದರು.


ಕಾರ್ಯಕ್ರಮದಲ್ಲಿ ಸುಳ್ಯ ತಾಲೂಕು ಕೇಂದ್ರ ಒಕ್ಕೂಟದ ಅಧ್ಯಕ್ಷ ಸುರೇಶ್ ಕಣೆಮರಡ್ಕ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾಪ್ರತಿನಿಧಿ ಬಾಲಕೃಷ್ಣ ಅಡ್ಕಾರು ಹಾಗೂ ಒಕ್ಕೂಟದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.
ಜಾಲ್ಸೂರು ವಲಯದ ಮೇಲ್ವಿಚಾರಕ ತೀರ್ಥರಾಮ ಅವರು ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು. ಒಕ್ಕೂಟದ ಉಪಾಧ್ಯಕ್ಷ ಅಶೋಕ ಅಡ್ಕಾರು ವಂದಿಸಿದರು.