ಯೋಗಾಸನ ಚಾಂಪಿಯನ್ ಶಿಪ್ ನಲ್ಲಿ ಅಕ್ಷಯ ಬಿ.ಎಂ ಗೆ ಬಹುಮಾನ

0

ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಜು.9 ರಂದು ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 9ನೇ ಯೋಗಾಸನ ಚಾಂಪಿಯನ್ ಶಿಪ್ ನಲ್ಲಿ 09 ವರ್ಷದ ಒಳಗಿನ ಬಾಲಕಿಯರ ವಿಭಾಗದಲ್ಲಿ ನಿರಂತರ ಯೋಗ ಕೇಂದ್ರ ಏನೇಕಲ್ಲು ಇದರ ವಿದ್ಯಾರ್ಥಿನಿ ಅಕ್ಷಯ ಬಿ. ಎಂ. 6ನೇ ಸ್ಥಾನ ಪಡೆದಿದ್ದಾರೆ.

ಇವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಏನೆಕಲ್ಲಿ ನಲ್ಲಿ 3ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಇವರು ಮೋಹನ್ ಮತ್ತು ದಿವ್ಯ ರವರ ಪುತ್ರಿ. ಇವರಿಗೆ ಯೋಗ ಗುರು ಶರತ್ ಮರ್ಗಿಲಡ್ಕರವರು ಮಾರ್ಗದರ್ಶನ ನೀಡಿರುತ್ತಾರೆ.