ಕುಡಿಯುವ ನೀರಿನ ಬಿಲ್ ಪಾವತಿ ಕುರಿತು ವಿಸ್ತ್ರತ ಚರ್ಚೆ
ಲಂಚ – ಭ್ರಷ್ಟಾಚಾರ ವಿರೋಧಿ ಫಲಕ ಅನಾವರಣ
ಕನಕಮಜಲು ಗ್ರಾಮ ಪಂಚಾಯತಿಯ 2022-23ನೇ ಸಾಲಿನ ದ್ವಿತೀಯ ಹಂತದ ಗ್ರಾಮಸಭೆಯು ಗ್ರಾಮ ಪಂಚಾಯತಿ ಅಧ್ಯಕ್ಷ ಶ್ರೀಧರ ಕುತ್ಯಾಳ ಅವರ ಅಧ್ಯಕ್ಷತೆಯಲ್ಲಿ ಜು.13ರಂದು ಗ್ರಾಮ ಪಂಚಾಯತಿ ಸಭಾಭವನದಲ್ಲಿ ಜರುಗಿತು.
ಸಹಾಯಕ ತೋಟಗಾರಿಕಾ ನಿರ್ದೇಶಕ ವಿಜೇತ್ ಎಸ್. ಅವರು ನೋಡೆಲ್ ಅಧಿಕಾರಿಯಾಗಿ ಉಪಸ್ಥಿತರಿದ್ದರು. ಗ್ರಾಮ ಪಂಚಾಯತಿ ಕಾರ್ಯದರ್ಶಿ ರಮೇಶ್ ಟಿ. ಅವರು ಆಡಳಿತ ವರದಿಯನ್ನು ಮಂಡಿಸಿದರು. ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸರೋಜಿನಿ ಅವರು ಗತಸಭೆಯ ವರದಿ ವಾಚಿಸಿದರು. ಗ್ರಾಮ ಪಂಚಾಯತಿ ಗುಮಾಸ್ತರಾದ ಪ್ರಭಾಕರ ಕಂಚಿಲ್ಪಾಡಿ ಅವರು ಜಮಾಖರ್ಚಿನ ವರದಿ ಮಂಡಿಸಿದರು.
ಸಭೆಯಲ್ಲಿ ಕುಡಿಯುವ ನೀರಿನ ಬಿಲ್ ಗ್ರಾ.ಪಂ.ಗೆ ಪಾವತಿಯಾಗಲು ಸಾಕಷ್ಟು ಬಾಕಿಯಿದ್ದು, ಈ ಬಗ್ಗೆ ವಿಸ್ತೃತವಾದ ಚರ್ಚೆ ನಡೆಯಿತು.
ಈ ಸಂದರ್ಭದಲ್ಲಿ ಸುದ್ದಿ ಜನಾಂದೋಲನದ ಲಂಚ – ಭ್ರಷ್ಟಾಚಾರ ವಿರೋಧಿ ಫಲಕ ಅನಾವರಣ ಮಾಡಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸರೋಜಿನಿ, ಕಾರ್ಯದರ್ಶಿ ರಮೇಶ್ ಟಿ., ಉಪಾಧ್ಯಕ್ಷೆ ಶ್ರೀಮತಿ ದೇವಕಿ ಕುದ್ಕುಳಿ, ಸದಸ್ಯರುಗಳಾದ ರವಿಚಂದ್ರ ಕಾಪಿಲ, ಶ್ರೀಮತಿ ಸುಮಿತ್ರ ಕುತ್ಯಾಳ, ಶ್ರೀಮತಿ ಶಾರದಾ ಉಗ್ಗಮೂಲೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿವರ್ಗದವರು ಉಪಸ್ಥಿತರಿದ್ದರು.