ಆಲೆಟ್ಟಿ ಗ್ರಾಮದ ಕೂರ್ನಡ್ಕ ದಿ.ರಾಮಣ್ಣ ಗೌಡ ರವರ ಪುತ್ರ ವಾಮನಾಥ ಯಾನೆ ಅಣ್ಣಿ ಕೂರ್ನಡ್ಕ ರವರು ಅಲ್ಪ ಕಾಲದ ಅಸೌಖ್ಯದಿಂದ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಜು.13 ರಂದು ನಿಧನರಾದರು.ಅವರಿಗೆ 48 ವರ್ಷ ವಯಸ್ಸಾಗಿತ್ತು.
ಕಳೆದ ಎರಡು ದಿನದ ಹಿಂದೆ ಅನಾರೋಗ್ಯಕ್ಕೆ ತುತ್ತಾದ ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಲಾಗಿತ್ತು.ಚಿಕಿತ್ಸೆಗೆ ಸ್ಪಂದಿಸದಿದ್ದುದರಿಂದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಎಂದು ತಿಳಿದು ಬಂದಿದೆ.
ಮೃತರು ಅವಿವಾಹಿತರಾಗಿದ್ದು ತಾಯಿ ಶ್ರೀಮತಿ ಕುಂಞಕ್ಕ, ಸಹೋದರ ದಿನೇಶ್ ಕೂರ್ನಡ್ಕ, ಸಹೋದರಿ ಶ್ರೀಮತಿ ವಸಂತಿ ಹಾಗೂ ಕುಟುಂಬಸ್ಥರನ್ನು, ಬಂಧು ಮಿತ್ರರನ್ನು ಅಗಲಿದ್ದಾರೆ. ಮೃತರು ಕೂರ್ನಡ್ಕ ಪ್ರಗತಿ ಯುವಕ ಮಂಡಲದ ಸಕ್ರಿಯ ಸದಸ್ಯರಾಗಿದ್ದರು.