ಜು. 23 ರಂದು ತೆಕ್ಕಿಲ್ ಮೊಹಮ್ಮದ್ ಹಾಜಿಯವರ 50 ನೇ ಪುಣ್ಯಸ್ಮರಣೆ
ಕರ್ನಾಟಕ ಸರಕಾರದ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ರವರು ತೆಕ್ಕಿಲ್ ಎಕ್ಸಲೆನ್ಸ್ ಅವಾರ್ಡ್ ಗೆ ಭಾಜನರಾಗಿದ್ದು ಜು.23 ರಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯುವುದು ಎಂದು ತೆಕ್ಕಿಲ್ ಪ್ರತಿಷ್ಠಾನ ಅಧ್ಯಕ್ಷ ಟಿ.ಎಂ. ಶಹೀದ್ ತೆಕ್ಕಿಲ್ ಹೇಳಿದ್ದಾರೆ.
ಜು.15 ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಅವರು ಈ ವಿಚಾರ ತಿಳಿಸಿದರು.
ಕಳೆದ ನೂರು ವರ್ಷಗಳಿಂದ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಪೇರಡ್ಕ ಗೂನಡ್ಕ, ಅರಂತೋಡು ಸಹಿತ ಕರ್ನಾಟಕ ಕೇರಳ ಮತ್ತು ಇತರ ವಿವಿಧ ಭಾಗಗಳಲ್ಲಿ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಕ್ರೀಯಶೀಲರಾಗಿ, ಉದ್ಯಮಿ ಯಾಗಿ ಸಮಾಜ ಸೇವಕರಾಗಿ ಅನೇಕ ಮಸೀದಿ ಮತ್ತು ಮದರಸಗಳ ಶಾಲೆಗಳ ವಿವಿಧ ಸಂಘ ಸಂಸ್ಥೆಗಳ ಸ್ಥಾಪಕರಾಗಿದ್ದ ತೆಕ್ಕಿಲ್ ಕುಟುಂಬದ ಹಿರಿಯರಾದ ಮರ್ ಹೂಮ್ ತೆಕ್ಕಿಲ್ ಮೊಹಮ್ಮದ್ ಹಾಜಿಯವರ 50ನೇ ಪುಣ್ಯಸ್ಮರಣೆ ಕಾರ್ಯಕ್ರಮ ಹಾಗೂ ಕರ್ನಾಟಕ ಸರಕಾರದ ವಿಧಾನಸೌಧದ ಸಭಾಪತಿಗಳಾದ ಯು.ಟಿ ಖಾದರ್ ರವರಿಗೆ ತೆಕ್ಕಿಲ್ ಎಕ್ಸಲೆನ್ಸ್ ಅವಾರ್ಡ್ ಪ್ರಶಸ್ತಿ ಪ್ರಧಾನ ಸಮಾರಭವು 23 ಜುಲೈ 2023 ರಂದು ಅರಂತೋಡು ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಕುಟುಂಬ ಸಮ್ಮಿಲನ, ಸಾಧಕರಿಗೆ ಸನ್ಮಾನ ಮತ್ತು ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು 50 ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು ಸಮಾರಂಭದಲ್ಲಿ ಕೇರಳ, ಕರ್ನಾಟಕ ರಾಜ್ಯದ ಸಚಿವರುಗಳು ವಿವಿಧ ಧಾರ್ಮಿಕ, ರಾಜಕೀಯ ಸಾಮಾಜಿಕ ಮುಖಂಡರುಗಳು ಮತ್ತು ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ಉದ್ಘಾಟನೆ ಮತ್ತು ಕರ್ನಾಟಕ ಸರಕಾರದ ವಿಧಾನಸಭಾಧ್ಯಕ್ಷರಾದ ಯು.ಟಿ ಖಾದರ್ ರವರಿಗೆ ತೆಕ್ಕಿಲ್ ಎಕ್ಸಲೆನ್ಸ್ ಅವಾರ್ಡ್ ಪ್ರಶಸ್ತಿ ಪ್ರಧಾನವನ್ನು ಜ| ಅಹಮ್ಮದ್ ದೇವರಕೋವಿಲ್ (ಮಾನ್ಯ ಬಂದರು ಮತ್ತು ವಸ್ತು ಸಂಗ್ರಹಾಲಯ ಸಚಿವರು ಕೇರಳ) ರವರು ನೆರವೇರಿಸಲಿದ್ದಾರೆ. ಸಾಧಕ ವಿಧ್ಯಾರ್ಥಿಗಳಿಗೆ ಸನ್ಮಾನವನ್ನು ಶ್ಯಾಮ್ ಭಟ್ ಮಾಜಿ ಅಧ್ಯಕ್ಷರು ಕರ್ನಾಟಕ ಲೋಕಸಭಾ ಆಯೋಗ ಇವರು ಮಾಡಲಿರುವರು. ಅಭಿನಂದನಾ ಭಾಷಣವನ್ನು ಲಯನ್ ಎಂ.ಬಿ ಸದಾಶಿವರವರು ಹಾಗೂ ತೆಕ್ಕಿಲ್ ಮಹಮ್ಮದ್ ಹಾಜಿಯವರ ಅನುಸ್ಮರಣೆಯನ್ನು ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ನಿವೃತ್ತ ಪ್ರಾಶುಪಾಲ ಕೆ.ಆರ್ ಗಂಗಾಧರ ಕುರುಂಜಿ ರವರು ಮಾಡಲಿದ್ದಾರೆ. ಸಭಾಧ್ಯಕ್ಷತೆಯನ್ನು ಟಿ.ಎಂ ಶಹೀದ್ ತೆಕ್ಕಿಲ್ ಇವರು ವಹಿಸಲಿದ್ದು. ಅಲ್ಲದೆ ಕಾರ್ಯಕ್ರಮದಲ್ಲಿ ಅನೇಕ ಗಣ್ಯರು, ಧಾರ್ಮಿಕ ಮತ್ತು ಸಾಮಾಜಿಕ ಮುಖಂಡರು ಹಾಗೂ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಅವರು ವಿವರ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಅಶ್ರಫ್ ಗುಂಡಿ, ಉನೈಸ್ ಪೆರಾಜೆ, ಅಬ್ದುಲ್ ಖಾದರ್ ಪಟೇಲ್ ಮೊದಲಾದವರಿದ್ದರು.