ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಕಬಡ್ಡಿ ತೀರ್ಪುಗಾರರ ಸಮಾಲೋಚನಾ ಸಭೆ ಮತ್ತು ಪುನಃಚೇತನ ಕಾರ್ಯಾಗಾರ

0

ದ. ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್, ಜಿಲ್ಲಾ ತೀರ್ಪುಗಾರರ ಮಂಡಳಿ ಸುಳ್ಯ, ಕಡಬ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್,ಇವರ ಸಂಯುಕ್ತ ಆಶ್ರಯದಲ್ಲಿ ಸಮಾಲೋಚನಾ ಸಭೆ ಹಾಗೂ ಪುನಃ ಚೇತನ ಕಾರ್ಯಾಗಾರ.
ಇಂದು ಕುಮಾರಸ್ವಾಮಿ ವಿದ್ಯಾಲಯದ ಕುಮಾರ್ ನಾಯರ್ ಸ್ಮೃತಿ ಭವನದಲ್ಲಿ ನಡೆಯಿತು. ಕರ್ನಾಟಕ ರಾಜ್ಯ ಮತ್ತು ದ. ಕ ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಷನ್ ರಾಕೇಶ್ ಮಲ್ಲಿ ಅಧ್ಯಕ್ಷತೆ ವಹಿಸಿದ್ದರು.


ಸಮಾರಂಭದ ಉದ್ಘಾಟನೆಯನ್ನು ಸುಳ್ಯ ವಿಧಾನಸಭಾ ಕ್ಷೇತ್ರ ಸದಸ್ಯರಾದ ಮಾನ್ಯ ಭಾಗೀರಥಿ ಮುರುಳ್ಯ ನೆರವೇರಿಸಿದರು,
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ವಾಲಿಬಾಲ್ ಅಸೋಸಿಯೇಷನ್ ಉಪಾಧ್ಯಕ್ಷ ನ್ಯಾಯವಾದಿ ಜಯಪ್ರಕಾಶ್ ರೈ,
ಸುಳ್ಳು ತಾಲೂಕು, ಅಮೆಚೂರು ಕಬಡ್ಡಿ ಅಸೋಸಿಯೇಷನ್ ಗೌರವ್ಯಾಧ್ಯಕ್ಷರಾದ ನಿತ್ಯಾನಂದ ಮುಂಡೋಡಿ, ಅನುಗ್ರಹ ಎಜುಕೇಶನ್ ಟ್ರಸ್ಟ್ ಇದರ ಮುಖ್ಯಸ್ಥರಾದ ಗಣೇಶ್ ಪ್ರಸಾದ್,
ಸಮಾರಂಭದಲ್ಲಿ ಅತಿಥಿಗಳಾಗಿ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಕಾರ್ಯಾಧ್ಯಕ್ಷರಾದ ಪುರುಷೋತ್ತಮ್ ಪೂಜಾರಿ, ಪ್ರಧಾನ ಕಾರ್ಯದರ್ಶಿಗಳಾದ ರತನ್ ಶೆಟ್ಟಿ ಉಪಸ್ಥಿತರಿದ್ದರು.
ಇಂದಿನ ಈ ಕಾರ್ಯಗಾರದ ಸಂಪನ್ಮೂಲ ವ್ಯಕ್ತಿ ಎನ್.ಐ.ಎಸ್ ತರಬೇತಿದಾರರಾದ ಕಿರಣ್ ಆರಂಪಾಡಿ,
ಸುಳ್ಯ ಕಡಬ ತಾಲೂಕು ಕಬಡ್ಡಿ ಅಸೋಸಿಯೇಷನ್ ಅಧ್ಯಕ್ಷರು ಕಾರ್ಯದರ್ಶಿಗಳು, ಜಿಲ್ಲಾ ನಿರ್ಣಾಯಕ ಮಂಡಳಿಯ ಅಧ್ಯಕ್ಷರು ಸಂಚಾಲಕರು ಹಾಗೂ ಖಜಾಂಜಿ ಉಪಸ್ಥಿತರಿದ್ದರು.


ದಕ್ಷಿಣ ಕನ್ನಡ ಜಿಲ್ಲಾ ಕಬಡ್ಡಿ ನಿರ್ಣಾಯಕ ಮಂಡಳಿ ಅಧ್ಯಕ್ಷ ಶಿವರಾಮ್ ಏನೇಕಲ್ಲು ಸ್ವಾಗತ ಮಾಡಿದರು,
ಸುಳ್ಯ ತಾಲೂಕು ಕಬಡ್ಡಿ ಅಸೋಸಿಯೇಷನ್ ಅಧ್ಯಕ್ಷರಾದ ಮಾಧವ ಬಿ.ಕೆ ಪ್ರಸ್ತಾವನೆ ಗೈದರು,
ಜಿಲ್ಲಾ ನಿರ್ಣಯಕ ಮಂಡಳಿ ಸಂಚಾಲಕರಾದ ನವೀನ್ ಎಂ ಹೆಗಡೆ ಮೂಡಬಿದ್ರೆ ಧನ್ಯವಾದ ಮಾಡಿದರು.
ದೈಹಿಕ ಶಿಕ್ಷಣ ನಿರ್ದೇಶಕ ಅಜಿತ್ ಅವರು ನಿರೂಪಣೆ ಗೈದರು.