ಕೆ.ವಿ.ಜಿ ದಂತ ಮಹಾವಿದ್ಯಾಲಯದ 23 ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ

0

ಕೆ.ವಿ.ಜಿ ದಂತ ಮಹಾವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಅತೀ ಹೆಚ್ಚು ಅಂಕಗಳಿಸಿದ ೨೩ ವಿದ್ಯಾರ್ಥಿಗಳಿಗೆ ಸರಕಾರದಿಂದ ಕೊಡಲ್ಪಡುವ ಉಚಿತ ಲ್ಯಾಪ್‌ಟಾಪ್ ವಿತರಣೆ ಕಾರ್ಯಕ್ರಮ ಕೆ.ವಿ.ಜಿ ದಂತ ಮಹಾವಿದ್ಯಾಲಯದಲ್ಲಿ ನಡೆಯಿತು.


ಲ್ಯಾಪ್‌ಟಾಪ್ ವಿತರಿಸಿ ಮಾತನಾಡಿದ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ|ಉಜ್ವಲ್ ಊರುಬೈಲು ವೈದ್ಯಕೀಯ ಶಿಕ್ಷಣ ಇಲಾಖೆಯಿಂದ ಕೊಡಲ್ಪಡುವ ಲ್ಯಾಪ್‌ಟಾಪ್‌ನ್ನು ಉಪಯೋಗಿಸಿಕೊಂಡು ಆಧುನಿಕ ತಂತ್ರಜ್ಞಾನ ಮತ್ತು ವಿಶೇಷ ವಿಭಾಗಗಲ ಮಾಹಿತಿಯನ್ನು ಪಡೆದುಕೊಂಡು ಅದನ್ನು ತಮ್ಮ ಶಿಕ್ಷಣದಲ್ಲಿ ಉಪಯೊಗಿಸಿಕೊಳ್ಳುವ ಮೂಲಕ ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಸಾಧನೆಯನ್ನು ಮಾಡಿ ನಮ್ಮೆಲ್ಲರ ಶಿಕ್ಷಣಕ್ಕೆ ಪೂರಕವಾದ ವಾತಾವರಣದೊಂದಿಗೆ ಉನ್ನತ ಜ್ಞಾನ ಪಡೆಯಲು ಇಂತಹ ಯೊಜನೆಗಳು ಸಹಕಾರಿಯಾಗಲೆಂದು ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ ಮೋಕ್ಷ ನಾಯಕ್ ಆಡಳಿತ ಆಡಳಿತ ಪರಿಷತ್ ಸದಸ್ಯರಾದ ಡಾ|ಮನೋಜ್ ಕುಮಾರ್ ಅಡ್ಡಂತಡ್ಕ, ಪ್ರಾಧ್ಯಾಪಕರಾದ ಡಾ|ಹೇಮಂತ್ ಕಾಲೇಜಿನ ಆಡಳಿತ ಅಧಿಕಾರಿ ಬಿ.ಟಿ ಮಾಧವ ಗೌಡ ಉಪಸ್ಥಿತರಿದ್ದರು.