ಜಗತ್ತಿನ ಎಲ್ಲಾ‌ ಬದಲಾವಣೆಗಳಿಗೆ ಮಾಧ್ಯಮ ಪೂರಕ : ಶಾಸಕಿ ಭಾಗೀರಥಿ ಮುರುಳ್ಯ

0

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬ ಉದ್ಘಾಟನೆ

“ಮಾಧ್ಯಮಗಳು ಎಲ್ಲಾ ಮಾಹಿತಿ, ಜ್ಞಾನವನ್ನು ನಮಗೆಲ್ಲ ಕೊಡುತ್ತದೆ. ಜಗತ್ತಿನ ಎಲ್ಲ ಬದಲಾವಣೆಗಳಿಗೆ ಮಾಧ್ಯಮ ಪೂರಕವಾಗಿದೆ” ಎಂದು ಶಾಸಕಿ‌ ಭಾಗೀರಥಿ ಮುರುಳ್ಯ ಹೇಳಿದರು.

ಜು.19 ರಂದು‌ ಸುಳ್ಯದ ಬಂಟರ ಭವನದಲ್ಲಿ ನಡೆದ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಸುಳ್ಯ ತಾಲೂಕಿನ ಪತ್ರಕರ್ತರ ಸಂಘ ಬೆಳ್ಳಿ ಹಬ್ಬ ಆಚರಿಸುತ್ತಿರುವುದು ಅತ್ಯಂತ ಸಂತಸದ ವಿಷಯ” ಎಂದು‌ ಹೇಳಿದರು.

ಬೆಳ್ಳಿಹಬ್ಬ ಸಮಿತಿಯ ಅಧ್ಯಕ್ಷ ಗಂಗಾಧರ ಮಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಉದ್ಯಮಿ ಆರ್. ಕೆ. ನಾಯರ್, ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ಸೀತಾರಾಮ ರೈ ಸವಣೂರು,
ಕಾರ್ಯನಿರತ ಪತ್ರಕರ್ತರ ಸಂಘದ ದ.ಕ. ಜಿಲ್ಲಾ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದ್ರಜೆ, ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ವೇದಿಕೆಯಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದಯಾನಂದ ಕೊರತೋಡಿ, ಕಾರ್ಯದರ್ಶಿ ಶಿವಪ್ರಸಾದ್ ಕೇರ್ಪಳ, ಜಿಲ್ಲಾ ಸಂಘದ ಕಾರ್ಯದರ್ಶಿ ಗಂಗಾಧರ ಕಲ್ಲಪಲ್ಲಿ ಉಪಸ್ಥಿತರಿದ್ದರು.

ಬೆಳ್ಳಿ ಹಬ್ಬ ಸಮಿತಿಯ ಕಾರ್ಯದರ್ಶಿ ದುರ್ಗಾಕುಮಾರ್ ನಾಯರ್ಕೆರೆ ಪ್ರಾಸ್ತಾವಿಕ ಮಾತನಾಡಿದರು.

ಸ್ಮರಣ ಸಂಚಿಕೆ ಸಂಪಾದಕ ಜೆ.ಕೆ. ರೈ ಸ್ವಾಗತಿಸಿದರು.

ಪತ್ರಕರ್ತರ ಸಂಘದ ಪೂರ್ವಾಧ್ಯಕ್ಷ ಲೋಕೇಶ್ ಪೆರ್ಲoಪಾಡಿ ಕಾರ್ಯಕ್ರಮ ನಿರೂಪಿಸಿದರು.

ಇದೇ ಸಂದರ್ಭದಲ್ಲಿ ಕೆ.ಎo.ಸಿ. ಆಸ್ಪತ್ರೆ ವತಿಯಿಂದ ಪತ್ರಕರ್ತರಿಗೆ ನೀಡಿದ ಮಣಿಪಾಲ ಹೆಲ್ತ್ ಕಾರ್ಡ್ ನ್ನು ಸಂಕೇತಿಕವಾಗಿ ಅಧ್ಯಕ್ಷ ದಯಾನಂದ ಕೊರತೋಡಿ ಯವರಿಗೆ ವಿತರಿಸಲಾಯಿತು.