ಮಣಿಪಾಲ ಆರೋಗ್ಯ ಕಾರ್ಡ್ 2023ರ ನೋಂದಾವಣೆ ಪ್ರಕ್ರಿಯೆಗೆ ಚಾಲನೆ

0

ಸುಳ್ಯ, ಜುಲೈ 19, 2023: 2023ನೇ ಸಾಲಿನ ಮಣಿಪಾಲ ಆರೋಗ್ಯ ಕಾರ್ಡ್ ಯೋಜನೆಯ ದಾಖಲಾತಿಯು ಪ್ರಾರಂಭವಾಗಿದ್ದು ಸುಳ್ಯ ಮತ್ತು ಆಸುಪಾಸಿನ ಜನರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಮಂಗಳೂರಿನ ಕೆ.ಎಂ.ಸಿ. ಆಸ್ಪತ್ರೆಯ ಪ್ರಕಟಣೆಯು ತಿಳಿಸಿದೆ.

ಗುಣಮಟ್ಟದ ಆರೋಗ್ಯ ಸೇವೆಯನ್ನು ಸಾರ್ವಜನಿಕರಿಗೆ ಕೈಗೆಟಕುವಂತೆ ಮಾಡುವ ಉದ್ದೇಶದಿಂದ ಮಣಿಪಾಲ್ ಆರೋಗ್ಯ ಕಾರ್ಡನ್ನು ಪ್ರಾರಂಭಿಸಲಾಗಿದ್ದು, ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ, ಯಾರಾದರೂ ಸದಸ್ಯರಾಗಬಹುದು ಮತ್ತು ಪ್ರಯೋಜನಗಳನ್ನು ಪಡೆಯಬಹುದು. ಈ ಯೋಜನೆಯು ಒಂದು ವರ್ಷ ಮತ್ತು ಎರಡು ವರ್ಷದ ಅವಧಿಯನ್ನು ಹೊಂದಿದ್ದು ಈ ಆರೋಗ್ಯ ಕಾರ್ಡ್ ಹೊಂದಿರುವವರು ಮಣಿಪಾಲ್ ಸಮೂಹ ಆಸ್ಪತ್ರೆಗಳಾದ ಕೆ.ಎಂ.ಸಿ. ಆಸ್ಪತ್ರೆ ಅತ್ತಾವರ, ಕೆ.ಎಂ.ಸಿ. ಆಸ್ಪತ್ರೆ ಅಂಬೇಡ್ಕರ್ ವೃತ್ತ, ದುರ್ಗಾ ಸಂಜೀವನಿ ಮಣಿಪಾಲ್ ಆಸ್ಪತ್ರೆ ಕಟೀಲು, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ, ಡಾ. ಟಿಎಂಎ ಪೈ ಆಸ್ಪತ್ರೆ ಉಡುಪಿ, ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆ ಕಾರ್ಕಳ, ಹಾಗೂ ಮಣಿಪಾಲ್ ಆಸ್ಪತ್ರೆ ಗೋವಾಗಳಲ್ಲಿ ರಿಯಾಯಿತಿ ಸೌಲಭ್ಯಗಳನ್ನು ಪಡೆಯಬಹುದು. ಈ ಕಾರ್ಡ್ನ ಸೌಲಭ್ಯಗಳು ದಂತ ಚಿಕಿತ್ಸೆಗೂ ಅನ್ವಯವಾಗಲಿದ್ದು ಕಾರ್ಡುದಾರರು ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸಾಯನ್ಸಸ್ ಮಂಗಳೂರು ಮತ್ತು ಮಣಿಪಾಲದಲ್ಲಿ ರಿಯಾಯಿತಿ ಸೌಲಭ್ಯಗಳನ್ನು ಪಡೆಯಬಹುದು.

ಮಣಿಪಾಲ ಆರೋಗ್ಯ ಕಾರ್ಡ್ ಹೊಂದಿರುವವರು ಎಲ್ಲಾ ತಜ್ಞ ಅಥವಾ ಸೂಪರ್ ಸ್ಪೆಷಲಿಸ್ಟ್ ವೈದ್ಯರ ಹೊರರೋಗಿ ಸಮಾಲೋಚನೆ ಮೇಲೆ 25% ರಿಂದ 50%ರ ವರೆಗೆ ರಿಯಾಯಿತಿ, ಪ್ರಯೋಗಾಲಯ ಪರೀಕ್ಷೆಗಳ ಮೇಲೆ 20% ರಿಯಾಯಿತಿ, ರೇಡಿಯಾಲಜಿ ಪರೀಕ್ಷೆಗಳಾದ ಸಿಟಿ. ಎಮ್.ಆರ್.ಐ, ಅಲ್ಟ್ರಾಸೌಂಡ್, ಎಕ್ಸ್ರೇ ಹಾಗೂ ಇನ್ನಿತರ ಪರೀಕ್ಷೆಗಳ ಮೇಲೆ 20% ರಿಯಾಯಿತಿ, ಆಸ್ಪತ್ರೆಯ ಔಷಧಾಲಯದಿಂದ ಖರೀದಿಸಿದ ಔಷಧಿಗಳ ಮೇಲೆ 10%ರ ವರೆಗೆ ರಿಯಾಯಿತಿಯನ್ನು ಹೊಂದಿರುತ್ತದೆ. ಒಳರೋಗಿಯಾಗಿ ದಾಖಲಾದಲ್ಲಿ (ಕನ್ಸ್ಯೂಮೇಬಲ್ಸ್ ಮತ್ತು ಪ್ಯಾಕೇಜ್ಗಳನ್ನು ಹೊರತುಪಡಿಸಿ) ಬಿಲ್ಲಿನಲ್ಲಿ 25% ವರೆಗೆ ರಿಯಾಯಿತಿ ಸಿಗುತ್ತದೆ. ಈ ಯೋಜನೆಗೆ ಸೇರಲು ವಯಸ್ಸಿನ ಮಿತಿಯಿಲ್ಲದ ಕಾರಣ, ಈ ಯೋಜನೆಯು ಹಿರಿಯ ನಾಗರಿಕರಿಗೆ ವರದಾನವಾಗಲಿದ್ದು ಕೈಗೆಟಕುವಿಕೆಯೊಂದಿಗೆ ಗುಣಮಟ್ಟದ ಆರೋಗ್ಯವನ್ನು ಪಡೆಯಲು ಸಹಾಯ ಮಾಡಿದೆ

ಒಂದು ವರ್ಷದ ಯೋಜನೆಯಲ್ಲಿ ಕಾರ್ಡಿನ ಸದಸ್ಯತ್ವವು ಒಬ್ಬರಿಗೆ ರೂ. 300/ – ಕೌಟಂಬಿಕ ಯೋಜನೆ ಅಂದರೆ ಕಾರ್ಡುದಾರ, ಅವರ ಸಂಗಾತಿ ಮತ್ತು 25 ವರ್ಷದ ಒಳಗಿನ ಮಕ್ಕಳಿಗೆ ರೂ. 600/- ಮತ್ತು ಕುಟುಂಬ ಪ್ಲಸ್ ಯೋಜನೆ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳು ಮತ್ತು 4 ಪೋಷಕರು (ತಂದೆ, ತಾಯಿ, ಅತ್ತೆ ಮತ್ತು ಮಾವ) ರೂ. 750/-. ಎರಡು ವರ್ಷದ ಯೋಜನೆಯಲ್ಲಿ ಒಬ್ಬರಿಗೆ ರೂ. 500/-, ಕೌಟಂಬಿಕ ರೂ. 800/- ಮತ್ತು ಕುಟುಂಬ ಪ್ಲಸ್ ಯೋಜನೆಗೆ ರೂ. 950/- ಆಗಿರುತ್ತದೆ.

ಸಾರ್ವಜನಿಕರು ಮಣಿಪಾಲ್ ಹೆಲ್ತ್ ಕಾರ್ಡ್ ನೋಂದಣಿಯನ್ನು ಮಾಡಲು ಸುಳ್ಯ ತಾಲೂಕಿನಾದ್ಯಂತ ಇರುವ ಈ ಕೆಳಕಂಡ ಅಧಿಕೃತ ಪ್ರತಿನಿಧಿಗಳನ್ನು ಸಂಪರ್ಕಿಸಬಹುದು. ಸುಳ್ಯ – 95356 18287, 8296121326 ಸುಬ್ರಮಣ್ಯ – 9448437831, ಬೆಳ್ಳಾರೆ – 8073472724, ಹಾಗೂ ರಾಮಕುಂಜ – 9844730868.

ಇದೇ ಸಂದರ್ಭದಲ್ಲಿ ಸುಳ್ಯ ತಾಲೂಕಿನ ಪತ್ರಿಕಾ ಮತ್ತು ಮಾಧ್ಯಮ ಸದಸ್ಯರಿಗೆ ಉತ್ತಮ ಆರೋಗ್ಯವನ್ನು ಹಾರೈಸುವ ಸೂಚಕವಾಗಿ ಸುಳ್ಯದಲ್ಲಿ ಹಮ್ಮಿಕೊಂಡಿದ್ದ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ 25 ರ ಸವಿನೆನಪಿನ ಬೆಳ್ಳಿಹಬ್ಬದ ಸಂಭ್ರಮದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು. ಭಾಗೀರಥಿ ಮುರುಳ್ಯ ಅವರು ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ (ರಿ) ದ ಅಧ್ಯಕ್ಷರಾದ ಶ್ರೀ ದಯಾನಂದ ಕೊರತ್ತೋಡಿ ಇವರಿಗೆ ಮಣಿಪಾಲ ಆರೋಗ್ಯ ಕಾರ್ಡ್ ಅನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕೆ. ಎಂ. ಸಿ ಆಸ್ಪತ್ರೆಯ ಮಾರ್ಕೆಟಿಂಗ್ ವಿಭಾಗದ ಶ್ರೀ ಮನಮೋಹನ ದೇವ ಮತ್ತು ಶ್ರೀ ಕಾರ್ತಿಕ್ ನಾಯಕ್ ಉಪಸ್ಥಿತರಿದ್ದರು.

ಮಣಿಪಾಲ ಆರೋಗ್ಯ ಕಾರ್ಡಿನ ಬಗ್ಗೆ ಹೆಚ್ಚಿನ ಮಾಹಿತಿಗಾಗಿ 9844002374 ಸಂಖ್ಯೆಗೆ ಕರೆ ಮಾಡಬಹುದು.