ಹವಾಮಾನ ಆಧಾರಿತ ಬೆಳೆ ವಿಮೆ – ಜು.31 ಕೊನೆಯ ದಿನ

0

ತೋಟಗಾರಿಕಾ ಇಲಾಖೆ ಸೂಚನೆ

ತೋಟಗಾರಿಕೆ ಬೆಳೆಗಳಿಗೆ ಸಂಬಂಧಿಸಿ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ (WಃಅIS) ಕಾರ್ಯಕ್ರಮವನ್ನು 2023ರ ಮುಂಗಾರು ಹಂಗಾಮಿಗೆ ಅನ್ವಯಿಸಿ ಗ್ರಾಮ ಪಂಚಾಯತ್ ((Unit Area of Insurance) ಮಟ್ಟದಲ್ಲಿ ಅನುಷ್ಠಾನಗೊಳಿಸಲು ಕರ್ನಾಟಕ ಸರಕಾರಿ ಆದೇಶ ಸಂ:ತೋಇ:208:ತೋಸವಿ:2020: ಬೆಂಗಳೂರು ದಿನಾಂಕ 8-೦6-2021 ರ ಮೂಲಕ ಅಧಿಸೂಚಿಸಲಾಗಿದೆ.

ಈ ಯೋಜನೆಯು ಕೇಂದ್ರ ಸರಕಾರ ನೀಡಿರುವ ಮಾನದಂಡಗಳ ಆಧಾರದಲ್ಲಿ ಅಧಿಸೂಚಿತ ತೋಟಗಾರಿಕೆ ಬೆಳೆಗಳನ್ನು ಬೆಳೆದ ರೈತರಿಗೆ ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಉಂಟಾದಲ್ಲಿ ವಿಮಾ ನಷ್ಟ ಪರಿಹಾರವನ್ನು ಪಡೆಯಲು ಅವಕಾಶವನ್ನು ಕಲ್ಪಿಸುತ್ತದೆ. ಈ ಯೋಜನೆಯನ್ನು ಮುಂಗಾರು ಹಂಗಾಮಿಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ನಗರ ಸ್ಥಳೀಯಾಡಳಿತ ಸಂಸ್ಥೆ ಹಾಗೂ ಎಲ್ಲಾ ೨೩೧ ಗ್ರಾಮ ಪಂಚಾಯತ್‌ಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಸದರಿ ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಮತ್ತು ಕರಿಮೆಣಸು ಬೆಳೆಗಳನ್ನು ಅಧಿಸೂಚಿಸಿ ಆದೇಶ ಹೊರಡಿಸಲಾಗಿದ್ದು, ೨೦೨೩ರ ಮುಂಗಾರು ಹಂಗಾಮಿಗೆ ಸಂಬಂಧಿಸಿ ವಿಮಾ ಕಂತು ಪಾವತಿಸಲು ದಿನಾಂಕ: ೩೧/೦೭/೨೦೨೩ ಅಂತಿಮ ದಿನವಾಗಿರುತ್ತದೆ. ಈ ಯೋಜನೆಯು ಅಧಿಸೂಚಿತ ಬೆಳೆಗಳಿಗೆ ಬ್ಯಾಂಕ್‌ಗಳಿಂದ (ರಾಷ್ಟ್ರೀಕೃತ ಬ್ಯಾಂಕ್/ ಖಾಸಗಿ/ ಸಹಕಾರಿ ಬ್ಯಾಂಕ್‌ಗಳು) ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಹೊಂದಿಲ್ಲದ ರೈತರಿಗೆ ಐಚ್ಚಿಕವಾಗಿರುತ್ತದೆ. ಈ ಯೋಜನೆಯಡಿ ತೋಟಗಾರಿಕೆ ರೈತರು ಅಧಿಸೂಚಿತ ಬೆಳೆಗಳಿಗೆ ಸಂಬಂಧಿಸಿ ಸಾಲ ಪಡೆದುಕೊಂಡಿರುವ ಬ್ಯಾಂಕ್‌ಗಳ ಮೂಲಕ ಹಾಗೂ ಸಾಲ ಪಡೆಯದಿರುವ ರೈತರು ಉಳಿತಾಯ ಖಾತೆಯನ್ನು ಹೊಂದಿರುವ ಬ್ಯಾಂಕ್‌ಗಳ ಮೂಲಕ ವಿಮಾ ಕಂತುಗಳನ್ನು ಪಾವತಿಸಿ ಯೋಜನೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.
ಈ ಯೋಜನೆಯ ಅನುಸಾರ ಬೆಳೆ ಸಾಲ ಪಡೆದಿರುವ ಹಾಗೂ ಬೆಳೆ ಸಾಲ ಹೊಂದಿಲ್ಲದ ರೈತರಿಗೆ ಅಧಿಸೂಚಿತ ಬೆಳೆಗಳಿಗೆ ಈ ಕೆಳಗಿನಂತೆ ವಿಮಾ ಕಂತನ್ನು ಪಾವತಿಸಿ ವಿಮೆಯನ್ನು ಹೊಂದಬಹುದಾಗಿದೆ.

ಬೆಳೆ ಪ್ರತೀ ಹೆಕ್ಟೆರ್‌ಗೆ ವಿಮಾ ಮೊತ್ತ ರೂ.ಗಳಲ್ಲಿ ರೈತರು ಪಾವತಿಸಬೇಕಾದ ವಿಮಾಕಂತು (ಶೇ.5) ರಸೂಚನೆ
ಅಡಿಕೆ 128೦೦೦ 64೦೦
ಕರಿಮೆಣಸು 47೦೦೦ 235೦