ಸುಳ್ಯ ನ ಪಂ ಕಚೇರಿಯಲ್ಲಿ ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆಗೆ ಮಹಿಳೆಯರ ಸರತಿ ಸಾಲು

0

ಅರ್ಜಿ ಸಲ್ಲಿಸುವ ಕೇಂದ್ರಕ್ಕೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಭೇಟಿ

ಕರ್ನಾಟಕ ರಾಜ್ಯ ಸರ್ಕಾರದ ಮಹತ್ಕಾಂಕ್ಷಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದ್ದು ಸುಳ್ಯದ ನಗರ ಪಂಚಾಯತ್ ಕಚೇರಿಯಲ್ಲಿ ಅರ್ಜಿ ಸಲ್ಲಿಸುವ ಕೇಂದ್ರದಲ್ಲಿ ಮಹಿಳೆಯರ ಸರತಿ ಸಾಲು ಕಂಡುಬರುತ್ತದೆ.

ನಗರ ಪ್ರದೇಶದ ಜನತೆಗೆ ಸುಳ್ಯ ನಗರ ಪಂಚಾಯತ್ ಕಚೇರಿಯಲ್ಲಿ ಅರ್ಜಿ ಸಲ್ಲಿಸಲು ಕೇಂದ್ರವನ್ನು ತೆರೆಯಲಾಗಿದ್ದು ಎರಡು ಕೌಂಟರ್ ಗಳ ಮೂಲಕ ನೊಂದಾವಣಿ ಕಾರ್ಯಕ್ರಮ ನಡೆಯುತ್ತಿದೆ. ಸುಳ್ಯ ತಾಲೂಕು ಕಚೇರಿ ಮುಂಭಾಗದಲ್ಲಿ ಈ ಕ್ಲಿನಿಕ್ ಎಂಬ ಸಂಸ್ಥೆಯಲ್ಲಿಯೂ ಕೂಡ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ತಿಳಿದುಬಂದಿದೆ.


ನೊಂದಾವಣಿ ಕೇಂದ್ರಗಳಿಗೆ ಇಂದು ಸುಳ್ಯ ತಹಶೀಲ್ದಾರ್ ಮಂಜುನಾಥ್, ಕಂದಾಯ ನಿರೀಕ್ಷಕ ಅವಿನ್ ರಂಗತಮಲೆ, ಸುಳ್ಯ ನಗರ ಪಂಚಾಯತ್ ಮುಖ್ಯ ಅಧಿಕಾರಿ ಸುಧಾಕರ್, ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ನಗರ ಪಂಚಾಯತ್ ಸದಸ್ಯರುಗಳಾದ ಎಂ ವೆಂಕಪ್ಪ ಗೌಡ, ಡೇವಿಡ್ ಧೀರಾ ಕ್ರಾಸ್ತ, ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ಶಾಫಿ ಕುತ್ತಮ್ಮಟ್ಟೆ, ಶಶಿಧರ ಎಂ ಜೆ, ಭವಾನಿ ಶಂಕರ್ ಕಲ್ಮಡ್ಕ, ಚೇತನ್ ಕಜಗದ್ದೆ, ರಾಜು ಪಂಡಿತ್ ಮೊದಲಾದವರು ಉಪಸ್ಥಿತರಿದ್ದರು.


ಒಂದು ಕೇಂದ್ರದಲ್ಲಿ ದಿನದಲ್ಲಿ ಸುಮಾರು 60 ಫಲಾನುಭವಿಗಳಿಗೆ ನೊಂದಾವಣಿ ಕಾರ್ಯ ಮಾಡಲಾಗುತ್ತಿದ್ದು ಪ್ರತಿ ದಿನ ಬೆಳಿಗ್ಗೆ ಟೋಕನ್ ನೀಡುವ ಕಾರ್ಯ ನಡೆಯುತ್ತಿದೆ ಎಂದು ಕೇಂದ್ರದ ಸಿಬ್ಬಂದಿಗಳು ತಿಳಿಸಿದ್ದಾರೆ. ಭಾನುವಾರ ದಿನ ಹೊರತುಪಡಿಸಿ ಬಾಕಿ ಎಲ್ಲಾ ದಿನಗಳಲ್ಲಿ ನೋಂದಾವಣೆ ಕಾರ್ಯ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.