ಜು.25; ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ

0

ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಜು.25ರಂದು ನಡೆಯಲಿದೆ.
ಈ ಸಂದರ್ಭದಲ್ಲಿ ಗ್ರಾಮದ ವಿವಿಧ ಕಡೆ ಕಾಂಕ್ರೀಟ್ ರಸ್ತೆಗಳ ಉದ್ಘಾಟನೆ, ಗಡಿಕಲ್ಲು ಅಂಗನವಾಡಿ ಕೇಂದ್ರ ಉದ್ಘಾಟನೆ, ಕಲ್ಲುಗುಂಡಿ ಪೇಟೆಯಲ್ಲಿ ಮೀನು ಮಾರುಕಟ್ಟೆಯ ವಿಸ್ತೃತ ಕಟ್ಟಡ ಉದ್ಘಾಟನೆ, ಕುಡಿಯುವ ನೀರಿನ ಟ್ಯಾಂಕ್ ಉದ್ಘಾಟನೆ, ಅಂಗವಿಕಲರಿಗೆ ಸಿಂಟೆಕ್ ಟ್ಯಾಂಕ್ ವಿತರಣೆ, ಅಂಗವಿಕಲರ ಮನೆಗೆ ಸೋಲಾರ್ ಅಳವಡಿಕೆ, ಪಂಚಾಯತ್ ಕಚೇರಿಯಲ್ಲಿ ಕುಡಿಯುವ ನೀರಿನ ಕೂಲರ್ ಉದ್ಘಾಟನೆ ಸೇರಿದಂತೆ ಹಲವಾರು ಅಭಿವೃದ್ಧಿ ಕಾಮಗಾರಿ ಗಳ ಉದ್ಘಾಟನೆ ನಡೆಯಲಿದೆ.


ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ.ಕೆ.ಹಮೀದ್ ರವರ ವಿಶೇಷ ಮುತುವರ್ಜಿಯಲ್ಲಿ ನಡೆದ ಈ ಅಭಿವೃದ್ಧಿ ಕಾಮಗಾರಿಗಳು ಕ್ಷೇತ್ರದ ಶಾಸಕರು, ವಿಧಾನ ಪರಿಷತ್ ಸದಸ್ಯರು, ಅಧಿಕಾರಿಗಳ ಉಪಸ್ಥಿತಿಯಲ್ಲಿ ಕಾಮಗಾರಿ ಉದ್ಘಾಟನೆ ನಡೆಯಲಿದೆ.