ದಕ್ಷಿಣ ಕನ್ನಡ ಜಿಲ್ಲೆಯ ತೆಂಗು ರೈತ ಉತ್ಪಾದಕರ ಕಂಪನಿಯ ಸದಸ್ಯರಿಗೆ ಸಂಸ್ಥೆಯ ವತಿಯಿಂದ ಶೇರ್ ಬಾಂಡ್ ಪತ್ರ ವಿತರಣೆ ಹಾಗೂ ತೆಂಗು ಕೃಷಿಯ ಬಗ್ಗೆ ಮಾಹಿತಿ ಕಾರ್ಯಾಗಾರ ಜು.27 ರಂದು ಸುಳ್ಯದ ಶಿವ ಕೃಪಾ ಕಲಾ ಮಂದಿರದಲ್ಲಿ ನಡೆಯಲಿರುವುದು.
ಸಂಪನ್ಮೂಲ ವ್ಯಕ್ತಿಯಾಗಿ ಸಿ.ಪಿ.ಸಿ.ಆರ್.ಐ ವಿಜ್ಞಾನಿ ದಿವಾಕರ ರವರು ತೆಂಗು ಕೃಷಿಯ ಕುರಿತು ಮಾಹಿತಿ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸುಳ್ಯ ಶಾಸಕಿ ಕು.ಭಾಗೀರಥಿ ಮುರುಳ್ಯ, ಸಂಸ್ಥೆಯ ಸದಸ್ಯರು, ಸಾಮಾಜಿಕ ಧುರೀಣರಾದ ನಿತ್ಯಾನಂದ ಮುಂಡೋಡಿ, ತಾಲೂಕು ರೈತ ಸಂಘದ ಅಧ್ಯಕ್ಷ ಲೋಲಜಾಕ್ಷ ಭೂತಕಲ್ಲು ಉಪಸ್ಥಿತರಿರುವರು.
ಈ ಸಂದರ್ಭದಲ್ಲಿ ಸಂಸ್ಥೆಯ ವತಿಯಿಂದ ಹಮ್ಮಿಕೊಂಡ ವಿವಿಧ ಯೋಜನೆಗಳ ಬಗ್ಗೆ ವಿವರವನ್ನು ಕೃಷಿಕರಿಗೆ ತಿಳಿಯಪಡಿಸಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ ಕುಸುಮಾಧರ ಎಸ್.ಕೆ ತಿಳಿಸಿರುತ್ತಾರೆ.