ಜು.21 ರಂದು ತಹಶೀಲ್ದಾರ್ ರವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ನಿರ್ಣಯಿಸಲಾದಂತೆ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಕ್ಷೇತ್ರ ವಿಂಗಡಣೆಯ ಮುಂದುವರಿದ ಸಭೆಯು ಜು.24 ರಂದು ಶಾಸಕರ ಉಪಸ್ಥಿತಿಯಲ್ಲಿ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.
ಎಲ್ಲಾ ಪಕ್ಷದ ಮುಖಂಡರು ಮತ್ತು ಪ್ರತಿನಿಧಿಗಳು ಸಭೆಯಲ್ಲಿ ಉಪಸ್ಥಿತರಿರುವಂತೆ ತಹಶೀಲ್ದಾರ್ ಕೋರಿದ್ದಾರೆ.