ಸಾವಿರಾರು ವಿದ್ಯಾರ್ಥಿಗಳಿಗೆ ತೊಂದರೆ
ಸುಳ್ಯದ ಕುರುಂಜಿಭಾಗ್ ಎಂಬಲ್ಲಿ ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ನೀರು ರಸ್ತೆಯಲ್ಲಿ ಹರಿಯುತ್ತಿದ್ದು ಈ ರಸ್ತೆಯಲ್ಲಿ ಸಂಚರಿಸುವ ಸಾವಿರಾರು ಶಾಲಾ-ಕಾಲೇಜಿಗೆ ಹೋಗುವ ಮಕ್ಕಳು ತೊಂದರೆ ಪಡುವಂತಾಗಿದೆ.
ಮಳೆಗಾಲ ಆರಂಭಕ್ಕೂ ಮೊದಲೇ ರಸ್ತೆ ಬದಿಗಳಲ್ಲಿ ನಗರಾಡಳಿತ ಚರಂಡಿ ವ್ಯವಸ್ಥೆ ಮಾಡಬೇಕಿತ್ತು.ಆದರೆ ಚರಂಡಿ ಸಮರ್ಪಕವಾಗಿಲ್ಲದಿರುವುದರಿಂದ ನೀರು ರಸ್ತೆಯಲ್ಲಿ ಹರಿದು ಸಮಸ್ಯೆ ಎದುರಾಗಿದೆ.