ಬೆಳ್ಳಾರೆ ಕೆ.ಪಿ.ಎಸ್.ನಲ್ಲಿ ತಾಲೂಕು ಮಟ್ಟದ ವಿಶ್ವ ಜನಸಂಖ್ಯಾ ದಿನಾಚರಣೆ

0

ಜನಸಂಖ್ಯೆ ನಿಯಂತ್ರಣಕ್ಕೆ ಜನರಲ್ಲಿ ಜಾಗೃತಿ ಅಗತ್ಯ – ಭಾಗೀರಥಿ ಮುರುಳ್ಯ

“ಆರೋಗ್ಯ ಪೂರ್ಣ ಜೀವನ ಜನರಿಗೆ ಮುಖ್ಯವಾದುದು, ಈ ನಿಟ್ಟಿನಲ್ಲಿ ಜನಸಂಖ್ಯೆ ಕಡಿಮೆ ಇರಬೇಕು.ಜನರಲ್ಲಿ
ಲಿಂಗಸಮಾನತೆ,ಭೇದ ಭಾವ ಹೋಗಬೇಕು, ಜನಸಂಖ್ಯೆ ಜಾಸ್ತಿಯಾದರೆ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.ಜನಸಂಖ್ಯೆ ನಿಯಂತ್ರಣ ಮಾಡಲು ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.

ಅವರು ತಾಲೂಕು ಆಡಳಿತ ಸುಳ್ಯ, ತಾಲೂಕು ಪಂಚಾಯತ್ ಸುಳ್ಯ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ,ಕೆ.ಪಿ.ಎಸ್.ಬೆಳ್ಳಾರೆ ಕಾಲೇಜು ವಿಭಾಗದ ಆಶ್ರಯದಲ್ಲಿ ಜು.24 ರಂದು ಬೆಳ್ಳಾರೆ ಕೆ.ಪಿ.ಎಸ್. ಸಭಾಂಗಣದಲ್ಲಿ ನಡೆದ ವಿಶ್ವಜನಸಂಖ್ಯಾ ದಿನಾಚರಣೆಯನ್ನು ಉದ್ಘಾಟಿಸಿ ಬಳಿಕ ನಡೆದ ಸಭಾ ಕಾರ್ಯಕ್ರದಲ್ಲಿ ಮಾತನಾಡುತ್ತಿದ್ದರು.

ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸುಳ್ಯ ನೆಹರು ಮೆಮೋರಿಯಲ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ.ಸಂಜೀವ ಕುದ್ಪಾಜೆ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು.


ಸನ್ಮಾನ:
ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ತ್ರಿಮೂರ್ತಿ, ಸುಳ್ಯ ಸರಕಾರಿ ಆಸ್ಪತ್ರೆಯ ಡಿ.ಗ್ರೂಪ್ ನೌಕರ ಹುಕ್ರಪ್ಪ ರವರನ್ನು ಶಾಲು,ಹೊದಿಸಿ,ಫಲ,ಪುಷ್ಪ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.
ತಾಲೂಕಿನ ಆರೋಗ್ಯ ಕೇಂದ್ರದ ಸುರಕ್ಷಾಧಿಕಾರಿಗಳಾದ ಶ್ರೀಮತಿ ಚಂದ್ರಕಲಾ,ಶ್ರೀಮತಿ ಸಿ.ಬೇಬಿ,ಶ್ರೀಮತಿ ಚಂದ್ರಾವತಿ,ಶ್ರೀಮತಿ ಹೇಮಲತಾ ಜೆ,ಶ್ರೀಮತಿ ಭಾಗ್ಯ ಬಿ.ಎನ್, ಶ್ರೀಮತಿ ಲಾವಣ್ಯ,ಶ್ರೀಮತಿ ಕನಕಾಂಗಿ,ಶ್ರೀಮತಿ ರೇವತಿ,ಶ್ರೀಮತಿ ಕುಸುಮಾವತಿ,ಶ್ರೀಮತಿ ಪವಿತ್ರ ಜೆ,ತಾರಾ ಪಿ ಇವರನ್ನು ಗೌರವಿಸಲಾಯಿತು.


ಆಶಾ ಕಾರ್ಯಕರ್ತೆಯರಾದ ಶ್ರೀಮತಿ ರಾಗಿಣಿ,ಶ್ರೀಮತಿ ಮೋಹನಾಂಗಿ, ಶ್ರೀಮತಿ ರತ್ನಾವತಿ,ಶ್ರೀಮತಿ ನಿರ್ಮಲ,ಶ್ರೀಮತಿ ಚಿತ್ರಾ,ಶ್ರೀಮತಿ ನೇತ್ರಾವತಿಯವರನ್ನು ಶಾಲು ಹೊದಿಸಿ,ಸ್ಮರಣಿಕೆ ನೀಡಿ ಗೌರವಿಸಲಾಯಿತು.

ವೇದಿಕೆಯಲ್ಲಿ ತಹಶೀಲ್ದಾರ್ ಮಂಜುನಾಥ ಎಂ, ತಾಲೂಕು ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ ಎನ್.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ಶೈಲಜಾ,ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಗಿರೀಶ್ ,ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ಉಪಾಧ್ಯಕ್ಷ ಶ್ರೀನಾಥ ರೈ ಬಾಳಿಲ, ಕಾಲೇಜಿನ ಪ್ರಭಾರ ಪ್ರಾಂಶುಪಾಲ ವಿಶ್ವನಾಥ ಗೌಡ ಪಿ, ಉಪಪ್ರಾಂಶುಪಾಲೆ ಶ್ರೀಮತಿ ಉಮಾಕುಮಾರಿ ಉಪಸ್ಥಿತರಿದ್ದರು.

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ತಾಲೂಕು ಆರೋಗ್ಯಾಧಿಕಾರಿ ಡಾ.ನಂದಕುಮಾರ್ ಸ್ವಾಗತಿಸಿ,ಪ್ರಾಸ್ತಾವಿಕವಾಗಿ ಮಾತನಾಡಿದರು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ಪ್ರಮೀಳಾರವರು ಕಾರ್ಯಕ್ರಮ ನಿರೂಪಿಸಿ, ಆರೋಗ್ಯ ಸುರಕ್ಷಾಧಿಕಾರಿ ಶ್ರೀಮತಿ ಬೇಬಿ ವಂದಿಸಿದರು.