ಮರ ತೆರವು: ಮಂಗಳೂರು – ಮಡಿಕೇರಿ ರಸ್ತೆ ಸಂಚಾರ ಮುಕ್ತ

0

ಮಡಿಕೇರಿ -ಮಂಗಳೂರು ಹೆದ್ದಾರಿ ಮದೆ ಸಮೀಪದ ಕರತೋಜಿ ಬಳಿ ಹೆಚ್ಚಿನ ಮಳೆಯಿಂದಾಗಿ ಬೃಹತ್ ಮರ ರಸ್ತೆಗೆ ಬಿದ್ದ ಪರಿಣಾಮ ಸಾರಿಗೆ ಸಂಚಾರದಲ್ಲಿ‌ ವ್ಯತ್ಯಯ ಉಂಟಾಗಿತ್ತು.

ಈ ಸಂಬಂಧ ಉಪ ವಿಭಾಗಾಧಿಕಾರಿ ಡಾ.ಯತೀಶ್‌ ಉಲ್ಲಾಳ್, ತಹಶಿಲ್ದಾರರಾದ ಕಿರಣ್ ಗೌರಯ್ಯ, ರಾಷ್ಟ್ರೀಯ ಹೆದ್ದಾರಿ ವಿಭಾಗದ ಅಭಿಯಂತರರು, ಅರಣ್ಯ ಇಲಾಖೆಯ ಸಿಬ್ಬಂದಿಯವರು, ಸ್ಥಳೀಯರ ಸಹಕಾರದೊಂದಿಗೆ ಮರವನ್ನು ತೆರವುಗೊಳಿಸಿ ಸುಗಮ ಸಾರಿಗೆ ಸಂಚಾರ ಕಲ್ಪಿಸಲಾಗಿದೆ ಎಂದು ತಿಳಿದುಬಂದಿದೆ.