ಸುಳ್ಯ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ (ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2023-24ನೇ ಸಾಲಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ : ಪ್ರವರ್ಗ -1, ಎಸ್.ಸಿ & ಎಸ್.ಟಿ ರೂ.2.50 ಲಕ್ಷ, ಪ್ರವರ್ಗ-2ಎ, 2ಬಿ, 3ಎ, 3ಬಿ, ಪ.ಜಾತಿ/ಪ.ವರ್ಗ ಮತ್ತು ಇತರೆ ರೂ.1 ಲಕ್ಷ ಆದಾಯ.
- ವಿದ್ಯಾರ್ಥಿಗಳು https://shp.karnataka.gov.in ಅನ್ನು ಸಂಪರ್ಕಿಸಿ ಆನ್‌ಲೈನ್‌ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು.
- ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 16.08.2023
- ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ https://bcwd.karnataka.gov.in/
ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ [email protected] ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ‘ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವುದು.
ಸಂಪರ್ಕಿಸಬಹುದಾದ ಸಹಾಯವಾಣಿ ಸಂಖ್ಯೆ : 8050770005
ಹೆಚ್ಚಿನ ಮಾಹಿತಿಗಾಗಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಯವರ ಕಛೇರಿ, ಕೊಡಿಯಾಲ್‌ಬೈಲ್ ಸುಳ್ಯ ಇವರನ್ನು ಸಂಪರ್ಕಿಸಬಹುದು, ದೂರವಾಣಿ ಸಂಖ್ಯೆ : 08257 – 230659.