ತೆಕ್ಕಿಲ್ ಗ್ರಾಮೀಣಾಭಿವ್ರದ್ದಿ ಪ್ರತಿಷ್ಠಾನ ಅರಂತೋಡು ಇದರ ವತಿಯಿಂದ ಜುಲೈ 23 ರಂದು ನಡೆದ ತೆಕ್ಕಿಲ್ ಮೊಹಮ್ಮದ್ ಹಾಜಿಯವರ ಪುಣ್ಯಸ್ಮರಣೆ ಹಾಗೂ ಕರ್ನಾಟಕ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ರವರ ತೆಕ್ಕಿಲ್ ಎಕ್ಸಲೆನ್ಸ್ ಅವಾರ್ಡ್ ಪ್ರಶಸ್ತಿ ಸಮಾರಂಭದಲ್ಲಿ ತಾಲೂಕಿನ ಪಿ.ಯು.ಸಿ ಮತ್ತು ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ವಿಧ್ಯಾರ್ಥಿಗಳನ್ನು ಮತ್ತು ತೆಕ್ಕಿಲ್ ಸಮೂಹ ಶಿಕ್ಷಣ ಸಂಸ್ಥೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗದ ಮಾಜಿ ಅಧ್ಯಕ್ಷ ಟಿ. ಶ್ಯಾಮ್ ಭಟ್ ಶಾಲು ಹೊದಿಸಿ, ಸ್ಮರಣಿಕೆ ಮತ್ತು ನಗದನ್ನು ನೀಡಿ ಗೌರವಿಸಿದರು.
ಈ ಸಂಧರ್ಭದಲ್ಲಿ ಕೇರಳ ರಾಜ್ಯದ ಬಂದರು ಮತ್ತು ವಸ್ತು ಸಂಗ್ರಹಾಲಯ ಸಚಿವ ಅಹಮ್ಮದ್ ದೇವರಕೋವಿಲ್ ತೆಕ್ಕಿಲ್ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ ಶಹೀದ್ ತೆಕ್ಕಿಲ್, ಸಂಪಾಜೆ ಚರ್ಚ್ ನ ಧರ್ಮ ಗುರುಗಳಾದ ಫಾ| ಫೌಲ್ ಕ್ರಾಸ್ತಾ, ರಾಷ್ಟç ಪ್ರಶಸ್ತಿ ವಿಜೇತ ಶಿಕ್ಷಕ ಕೆ.ಆರ್ ಗಂಗಾಧರ್, ಎಂ.ಬಿ. ಪೌಂಡೇಶನ್ ಅಧ್ಯಕ್ಷ ಎಂ. ಬಿ. ಸದಾಶಿವ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಧನಂಜಯ ಅಡ್ಪಂಗಾಯ ಕೆ.ಎಂ ಮುಸ್ತಫ ಸುಳ್ಯ, ಸದಾನಂದ ಮಾವಾಜಿ, ಕೆ.ಟಿ.ವಿಶ್ವನಾಥ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ರಾಜೀವಿ ರೈ, ಮಹಿಳಾ ಕಾಂಗ್ರೇಸ್ ಅಧ್ಯಕ್ಷೆ ಗೀತಾ ಕೋಲ್ಚಾರ್ ನಿವ್ರತ್ತ ಮುಖ್ಯೋಪಾಧ್ಯಾಯ ದಾಮೋದರ್ ಮಾಸ್ತರ್, ತೆಕ್ಕಿಲ್ ಪ್ರತಿಷ್ಠಾನದ ಕಾರ್ಯದರ್ಶಿ ಅಶ್ರಫ್ ಗುಂಡಿ, ತೆಕ್ಕಿಲ್ ಶಾಲಾ ಮುಖ್ಯೋಪಾದ್ಯಾಯ ಸಂಪತ್, ಸಾಧಿಕ್ ಮಾಸ್ತರ್ ಕಲ್ಲುಗುಂಡಿ ತೆಕ್ಕಿಲ್ ಶಾಲಾ ಶಿಕ್ಷಕಿಯರಾದ ತಾಹಿರಾ, ಮೆಹ್ತಾಂಝ್ ಶಾಲಾ ಸಂಚಾಲಕ ಟಿ.ಎಂ ಜಾವೇದ್ ತೆಕ್ಕಿಲ್, ಟಿ.ಎಂ ಶಾಝ್ ತೆಕ್ಕಿಲ್ ಮೊದಲಾದವರಿದ್ದರು.