ಕೆ.ವಿ.ಜಿ. ಪಾಲಿಟೆಕ್ನಿಕ್ : 100 % ಫಲಿತಾಂಶ

0

ತಾಂತ್ರಿಕ ಶಿಕ್ಷಣ ಇಲಾಖೆಯು ಕಳೆದ ಮೇ ತಿಂಗಳಲ್ಲಿ ನಡೆಸಿದ ಅಂತಿಮ ವರ್ಷದ ಡಿಪ್ಲೊಮ ಪರೀಕ್ಷೆಯಲ್ಲಿ ಕೆ.ವಿ.ಜಿ ಪಾಲಿಟೆಕ್ನಿಕ್ ಗೆ 100% ಫಲಿತಾಂಶ ಬಂದಿದೆ.
ಪರೀಕ್ಷೆಗೆ ಹಾಜರಾದ 191 ವಿದ್ಯಾರ್ಥಿಗಳಲ್ಲಿ 115 ಮಂದಿ ಡಿಸ್ಟಿಂಕ್ಷನ್, 60 ಮಂದಿ ಪ್ರಥಮ ಶ್ರೇಣಿ ಹಾಗೂ 16 ಮಂದಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣಗೊಂಡಿದ್ದಾರೆ.
ಅಟೊಮೊಬೈಲ್ ವಿಭಾಗದ 37 ವಿದ್ಯಾರ್ಥಿಗಳಲ್ಲಿ 16 ಮಂದಿ ಡಿಸ್ಟಿಂಕ್ಷನ್, 21 ಮಂದಿ ಪ್ರಥಮ ಶ್ರೇಣಿಯಲ್ಲಿ, ಸಿವಿಲ್ ವಿಭಾಗದ 16 ವಿದ್ಯಾರ್ಥಿಗಳಲ್ಲಿ ಎಲ್ಲರೂ ಡಿಸ್ಟಿಂಕ್ಷನ್, ಕಂಪ್ಯೂಟರ್ ಸೈನ್ಸ್ ವಿಭಾಗದ 11 ವಿದ್ಯಾರ್ಥಿಗಳಲ್ಲಿ ಎಲ್ಲರೂ ಡಿಸ್ಟಿಂಕ್ಷನ್, ಇಲೆಕ್ಟ್ರಿಕಲ್ ವಿಭಾಗದ 49 ವಿದ್ಯಾರ್ಥಿಗಳಲ್ಲಿ ಎಲ್ಲರೂ ಡಿಸ್ಟಿಂಕ್ಷನ್, ಇಲೆಕ್ಟ್ರಾನಿಕ್ಸ್ ವಿಭಾಗದ 18 ವಿದ್ಯಾರ್ಥಿಗಳಲ್ಲಿ ಎಲ್ಲರೂ ಡಿಸ್ಟಿಂಕ್ಷನ್
ಹಾಗೂ ಮೆಕ್ಯಾನಿಕಲ್ ವಿಭಾಗದ 60 ವಿದ್ಯಾರ್ಥಿಗಳಲ್ಲಿ 6 ,ಡಿಸ್ಟಿಂಕ್ಷನ್, 39 ಪ್ರಥಮ ಶ್ರೇಣಿ ಮತ್ತು 16 ಮಂದಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣಗೊಂಡಿದ್ದಾರೆ.
ಉತ್ತೀರ್ಣಗೊಂಡ ಬಹುತೇಕ ವಿದ್ಯಾರ್ಥಿಗಳಿಗೆ ವಿವಿಧ ಪ್ರತಿಷ್ಠಿತ. ಕಂಪೆನಿಗಳಲ್ಲಿ ಪ್ಲೇಸ್ ಮೆಂಟ್ ಆಗಿದ್ದು,
ಕಾಲೇಜಿನ ಆಡಳಿತ ಮಂಡಳಿ, ಸಿ.ಇ.ಒ, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳ ಸಾಧನೆಗೆ ಅಭಿನಂದನೆ ಸಲ್ಲಿಸಿದ್ದಾರೆ.