ಸುಳ್ಯ ಪೊಲೀಸ್ ಠಾಣೆಯಲ್ಲಿ ಮಹಿಳಾ ಕಾನ್ಸ್‌ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಜಯಂತಿ ಡಿ.ಎ. ಬೆಳ್ಳಾರೆ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡು ಜು. 27ರಂದು ಕರ್ತವ್ಯಕ್ಕೆ ಹಾಜಾರಗಿದ್ದಾರೆ.
2015ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡು ಮೈಸೂರು ಪೊಲೀಸ್ ತರಬೇತಿ ಶಾಲೆಯಲ್ಲಿ ತರಬೇತಿ ಮುಗಿಸಿದ ಬಳಿಕ 2016 ರಿಂದ ಇದುವರೆಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ 2023ರ ಸಾರ್ವತ್ರಿಕ ವರ್ಗಾವಣೆಯಲ್ಲಿ ಬೆಳ್ಳಾರೆ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಇವರು ಪುತ್ತೂರು ತಾಲೂಕಿನ ಮಾಡ್ನೂರು ಗ್ರಾಮದ ಮಾಣಿಯಡ್ಕ ಮನೆ ಶಶಿಧರ್ ಹೆಚ್ ರವರ ಪತ್ನಿ.