ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿಗೆ ವಿ.ಟಿ.ಯು. ಪರೀಕ್ಷೆಯಲ್ಲಿ ರ‍್ಯಾಂಕ್

0

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿಗೆ ಪ್ರಸಕ್ತ ಸಾಲಿನಲ್ಲಿ ನಡೆದ ವಿ.ಟಿ.ಯು ಪರೀಕ್ಷೆಯಲ್ಲಿ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿ ಅಬ್ದುಲ್ ಮುನ್ನಾವರಲಿ 9.39 ಸಿ.ಜಿ.ಪಿ.ಎ.ಯೊಂದಿಗೆ ರಾಜ್ಯಕ್ಕೆ 10ನೇ ರ‍್ಯಾಂಕ್ ಪಡೆದಿದ್ದಾರೆ.

ಇವರ ಈ ಸಾಧನೆಗೆಕೆ.ವಿ.ಜಿ. ಚಾರಿಟೇಬಲ್ ಮ್ಯಾನೇಜಿಂಗ್ ಟ್ರಸ್ಟಿ ಡಾ. ಕೆ.ವಿ. ರೇಣುಕಾಪ್ರಸಾದ್, ಕಾಲೇಜಿನ ಸಿ.ಇ.ಒ. ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಉಜ್ವಲ್ ಯು.ಜೆ., ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ ವಿ. ಮತ್ತು ಸಿವಿಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಡಾ. ಚಂದ್ರಶೇಖರ್ ಎ. ಹರ್ಷ ವ್ಯಕ್ತ ವ್ಯಕ್ತಪಡಿಸಿದ್ದಾರೆ.