ಪಂಜ : ಉಚಿತ ನೇತ್ರ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ ಉದ್ಘಾಟನೆ

0


🔸ಅಂಧತ್ವ ನಿವಾರಣೆಗೆ ಪಂಜ ಲಯನ್ಸ್ ಕ್ಲಬ್ ನ ನಿರಂತರ ಸೇವೆ-ಡಾ.ಮಂಜುನಾಥ ಸಿ
.

ಪಂಜ ಲಯನ್ಸ್ ಕ್ಲಬ್, ಪ್ರಾಥಮಿಕ ಆರೋಗ್ಯ ಕೇಂದ್ರ ಪಂಜ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ಮಂಗಳೂರು, ಸುಳ್ಯ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ ) ಉಡುಪಿ, ಮಂಗಳೂರು, ಸುಳ್ಯ, ಡಾ| ಪಿ ದಯಾನಂದ ಪೈ ಮತ್ತು ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್ (ರಿ ) ಸೆಂಚುರಿ ಗ್ರೂಪ್ ಬೆಂಗಳೂರು ಇವರ ಜಂಟಿ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರವು ಜು. 30 ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ಪಂಜದಲ್ಲಿ ನಡೆಯಿತು.


ಕಾರ್ಯಕ್ರಮವನ್ನು ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಮಂಜುನಾಥ ಸಿ ಉದ್ಘಾಟಿಸಿದರು. ಬಳಿಕ ಅವರು ಮಾತನಾಡಿ ‘ಅಂಧತ್ವ ನಿವಾರಣೆಗೆ ಪಂಜ ಲಯನ್ಸ್ ಕ್ಲಬ್ ನ ನಿರಂತರ ಸೇವೆ ನೀಡುತ್ತಿದೆ. ಈ ಮೂಲಕ ಮನುಷ್ಯನಿಗೆ ಅತೀ ಅಮೂಲ್ಯ ಅಗತ್ಯವಾದ ಕಣ್ಣಿನ ರಕ್ಷಣೆಯನ್ನು ಕಾಪಾಡುವ ವಿಶೇಷ ಕಾರ್ಯಕ್ರಮ ಇದಾಗಿದೆ”. ಎಂದು ಹೇಳಿದರು.

ಲಯನ್ಸ್ ಕ್ಲಬ್ ಅಧ್ಯಕ್ಷ ದಿಲೀಪ್ ಬಾಬ್ಲುಬೆಟ್ಟು ಸಭಾಧ್ಯಕ್ಷತೆ ವಹಿಸಿದ್ದರು. ಪ್ರಸಾದ್ ನೇತ್ರಾಲಯದ ವೈದ್ಯೆ ಡಾ.ಅಕ್ಷತಾ, ಲಯನ್ಸ್ ವಲಯಾಧ್ಯಕ್ಷ ಸಂತೋಷ್ ಜಾಕೆ, ಶಿಬಿರದ ಪ್ರಯೋಜಕ ಹಾಗೂ ಲಯನ್ಸ್ ಕ್ಲಬ್ ನ ಹಿರಿಯ ಸದಸ್ಯ ಸೀತಾರಾಮ ಗೌಡ ಕುದ್ವ,ಲಯನ್ಸ್ ಕ್ಲಬ್ ಕಾರ್ಯದರ್ಶಿ ವಾಸುದೇವ ಮೇಲ್ಪಾಡಿ, ಕೋಶಾಧಿಕಾರಿ ಆನಂದ ಜಳಕದಹೊಳೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ
ನೇಮಿರಾಜ ಪಲ್ಲೋಡಿ ವೇದಿಕೆಗೆ ಆಹ್ವಾನಿಸಿದರು. ಮೋಹನ್ ಕೂಟಾಜೆ ಪ್ರಾರ್ಥಿಸಿದರು.ಬಾಲಕೃಷ್ಣ ಗೌಡ ಕುದ್ವ ಪ್ರಾಸ್ತಾವಿಕ ಗೈದು ಮಾತನಾಡಿದರು. ವಾಸುದೇವ ಮೇಲ್ಪಾಡಿ ವಂದಿಸಿದರು.


ಶಿಬಿರದಲ್ಲಿ ಕಣ್ಣಿನ ಸಂಪೂರ್ಣ ತಪಾಸಣೆ ನಡೆಸಿ ,ಅಗತ್ಯವುಳ್ಳವರಿಗೆ ಉಚಿತವಾಗಿ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಮಾಡಲಾಗುತ್ತದೆ.