ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ಆಶ್ರಯದಲ್ಲಿ ಮೂರು ದಿನಗಳ ಫ್ಯಾಕಲ್ಟಿ ಡೆವಲಪ್ ಮೆಂಟ್ ಕಾರ್ಯಾಗಾರ ಜು. 27 ರಂದು ಉದ್ಘಾಟನೆಗೊಂಡಿತು. ಈ ಕಾರ್ಯಕ್ರಮದಲ್ಲಿ ರಾಜ್ಯ ಹಾಗು ಹೊರ ರಾಜ್ಯಗಳಿಂದ ಆನ್ಲೈನ್ ಮುಖಾಂತ 30 ಪ್ರಾಧ್ಯಾಪಕ ಹಾಗು ಸಂಸ್ಥೆಯ 47 ಬೋಧಕ ಮತ್ತು ಬೋಧಕೇತರರು ಹೀಗೆ ಒಟ್ಟು 77 ಮಂದಿ ಭಾಗವಹಿಸಿದರು.
ಮುಖ್ಯ ಅತಿಥಿಯಾಗಿ ಕಾಲೇಜಿನ ಪ್ರಾಂಶುಪಾಲ ಡಾ. ಸುರೇಶ ವಿ, ಭಾಗವಹಿಸಿ ಪ್ರಸ್ತುತ ರಾಷ್ಟ್ರೀಯ ಶಿಕ್ಷಣ ನೀತಿ ಅನುಸಾರವಾಗಿ ಹೊಸ ಹೊಸ ತಾಂತ್ರಿಕ ವಿಷಯಗಳ ಬಗ್ಗೆ ಒಲವು ಮೂಡಿಸಿಕೊಳ್ಳುವುದು ಅವಶ್ಯಕವಾಗಿದೆಯೆಂದು ಪ್ರಾಧ್ಯಾಪಕ ಮತ್ತು ವಿದ್ಯಾರ್ಥಿ ಸಮೂಹಕ್ಕೆ ಕರೆ ನೀಡಿದರು. ವಿಭಾಗ ಮುಖ್ಯಸ್ಥ ಡಾ. ಕುಸುಮಾಧರ ಎಸ್. ಕಾರ್ಯಗಾರದ ಮಹತ್ವವನ್ನು ವಿವರಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಇ & ಸಿ ವಿಭಾಗದ ಪ್ರಾಧ್ಯಾಪಕ ಜಗದೀಶ್ ಎಂ ಭಾಗವಹಿಸಿ ಕಂಪ್ಯೂಟರ್ ತಂತ್ರಜ್ಞಾನದ ಅಗತ್ಯತೆ ಮತ್ತು ಅದರ ಪ್ರಾಯೋಗಿಕ ಉದಾಹರಣೆಗಳನ್ನು ವಿವರಿಸಿದರು. ಕಾರ್ಯಕ್ರಮದಲ್ಲಿ ಡಾ. ಭಾಗ್ಯ ಹೆಚ್.ಕೆ. ವಂದಿಸಿದರು ಮತ್ತು ಪ್ರೊ. ಅರುಣ ಪಿ.ಜಿ. ಕಾರ್ಯಕ್ರಮ ನಿರೂಪಿಸಿದರು.