ಚದುರಂಗ ಸ್ಪರ್ಧೆ: ಜ್ಞಾನದೀಪ ವಿದ್ಯಾಸಂಸ್ಥೆಯ ನೇಹಾ ಸಿ.ಪಿ.ಜಿಲ್ಲಾ ಮಟ್ಟಕ್ಕೆ

0

ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ ಹಾಗೂ ಕೆ.ಪಿ.ಎಸ್. ಬೆಳ್ಳಾರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಆ 1 ರಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇಲ್ಲಿ ಜರುಗಿದ ಸುಳ್ಯ ತಾಲೂಕು ಮಟ್ಟದ ಚೆಸ್ ಪಂದ್ಯಾಟದಲ್ಲಿ ಎಂಟನೇ ತರಗತಿಯ ವಿಭಾಗದಲ್ಲಿ ಜ್ಞಾನದೀಪ ಎಲಿಮಲೆ ಶಾಲೆಯ ವಿದ್ಯಾರ್ಥಿನಿ ನೇಹಾ ಸಿ.ಪಿ. ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರು ಆ 3 ರಂದು ಕೆ.ಪಿ. ಎಸ್.ಬೆಳ್ಳಾರೆಯಲ್ಲಿಯೇ ನಡೆಯಲಿರುವ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ಸುಳ್ಯ ತಾಲೂಕು ತಂಡವನ್ನು ಪ್ರತಿನಿಧಿಸಲಿದ್ದಾರೆ.