ಹಾಲೆಮಜಲು : ಆಟಿಡೊಂಜಿ ದಿನ ಕಾರ್ಯಕ್ರಮದ ಸಮಾರೋಪ

0


ಕರ್ನಾಟಕ ಸ್ಟೇಟ್ ಟೈಲರ್ಸ್ ಎಸೋಸಿಯೇಶನ್ ಸುಳ್ಯ ಕ್ಷೇತ್ರ ಸಮಿತಿಯ ಗುತ್ತಿಗಾರು ವಲಯ ಸಮಿತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮವು ಇಂದು ಹಾಲೆಮಜಲಿನ ಶ್ರೀ ವೆಂಕಟೇಶ್ವರ ಸಭಾಭವನದಲ್ಲಿ ನಡೆದು ಸಂಜೆ ಸಮಾಪನಗೊಂಡಿತು. ಕಾರ್ಯಕ್ರಮದಲ್ಲಿ ಟೈಲರಿಂಗ್ ಸಂಘಟನೆಯ ಸದಸ್ಯರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

ನಂತರ ಪ್ರತಿಯೊಬ್ಬರು ತಮ್ಮ ತಮ್ಮ ಮನೆಯಲ್ಲಿ ತಯಾರಿಸಿ ಮಾಡಿದ ೩೮ ಬಗೆಯ ತಿಂಡಿ ತಿನಿಸ್ಯಗಳನ್ನು ಸೇರಿದವರೆಲ್ಲರೂ ಸವಿದು ಖುಷಿ ಪಟ್ಟರು. ವೇದಿಕೆಯಲ್ಲಿ ಜಿಲ್ಲಾ ಮಟ್ಟ ತಾಲೂಕು ಮತ್ತು ವಲಯವಾರು ಮಟ್ಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.