ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿಗಳು ಚೆಸ್ ನಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ದ.ಕ.ಜಿ .ಪಂ. ಸಹಕಾರಿ ಉನ್ನತಿ ಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಸಂಪಾಜೆ ಯಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಚೆಸ್ ಪಂದ್ಯಾಟದಲ್ಲಿ ಕುಮಾರಸ್ವಾಮಿ ವಿದ್ಯಾಲಯದ 10ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಪೂರ್ವಿ ಭಾಗವಹಿಸಿ ಐದನೇ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.


ಇವರು ಐವತೊಕ್ಲು ಗ್ರಾಮದ ರಾಮಚಂದ್ರಗೌಡ ಬಿ ಬರೆಯಲು ಮನೆ ಮತ್ತು ವಿದ್ಯಾಲತ ದಂಪತಿಗಳ ಪುತ್ರಿ. ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇಲ್ಲಿ ನಡೆದ ಪ್ರಾಥಮಿಕ ಶಾಲಾ ಮಕ್ಕಳ ತಾಲೂಕು ಮಟ್ಟದ ಚೆಸ್ ಪಂದ್ಯಾಟ ದಲ್ಲಿ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯದ ಏಳನೇ ತರಗತಿ ವಿದ್ಯಾರ್ಥಿ ಅಭಿನವ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.